ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂರಾರು ಜನರನ್ನು ಸೇರಿಸಿ ಕರೆಯಲ್ಲಿ ಪೂಜೆ ಮಾಡುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿದ್ದಾರೆ.ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಆಲವಾಟ್ಟ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ ತಮ್ಮದೆ ಮುಖಂಡರು, ಸ್ಥಳೀಯರನ್ನು ಸೇರಿಸಿಕೊಂಡು ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಪೂಜೆ ವೇಳೆ ನೂರಾರು ಜನರ ಜಮಾವಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮಾಜಿ ಸ್ಪೀಕರ್ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಡವರಿಗೊಂದು, ಶ್ರೀಮಂತರಿಗೊಂದು ನ್ಯಾಯಾನಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಬಡವರ ಮದುವೆಗೆ 10 ಜನರಿಗೆ ಮಾತ್ರ ಅವಕಾಶ ನೀಡುವ ಸರ್ಕಾರ, ಜನಪ್ರತಿನಿಧಿಗಳಿಗೆ ಈ ರೀತಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಕೆರೆ ಪೂಜೆಗೆ ನೂರಾರು ಜನರನ್ನು ಸೇರಿಸಿಕೊಂಡ ರಮೇಶ್ ಕುಮಾರ್ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇನ್ನೂ ವಿಶೇಷವೆಂದರೆ ಇದನ್ನು ರಮೇಶ್ ಕುಮಾರ್ ಬೆಂಬಲಿಗರು ಫೇಸ್‍ಬುಕ್ ನಲ್ಲಿ ಲೈವ್ ಮಾಡಿದ್ದಾರೆ.Sign in to your account
Username or Email Address


Password

 Remember Me


