ಮಡಿಕೇರಿ: ಕೂಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಕಾರ್ಮಿಕರಿಬ್ಬರ ಮೇಲೆ ಕಾಡಾನೆಗಳು ದಾಳಿ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ.ಸೋಮವಾರಪೇಟೆ ತಾಲೂಕಿನ ಕುಸುಬೂರು ನಿವಾಸಿಯಾದ ಕೃಷ್ಣ ಮತ್ತು ಕುಶಾಲಪ್ಪ ಗಂಭೀರವಾಗಿ ಗಾಯಗೊಂಡವರು. ಕೂಲಿ ಕೆಲಸ ಮುಗಿಸಿ ಸೋಮವಾರಪೇಟೆ ತಾಲ್ಲೂಕಿನ ಕಾರೆಕೊಪ್ಪಲಿನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಗಳು ದಾಳಿ ನಡೆಸಿವೆ.ಘಟನೆಯಲ್ಲಿ ಕೃಷ್ಣ ಅವರ ಕಾಲು ಮುರಿದಿದ್ದು, ಕುಶಾಲಪ್ಪ ಅವರ ತಲೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಇಬ್ಬರಿಗೂ ಸೋಮವಾರಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾಡಾನೆ ದಾಳಿ ನಡೆಸುತ್ತಿದ್ದಂತೆ ಸ್ಥಳೀಯರು ಜೋರಾಗಿ ಕೂಗಾಡಿದ್ದರಿಂದ ಕಾಡಾನೆ ಇಬ್ಬರನ್ನು ಬಿಟ್ಟು ಹೋಗಿದೆ. ಹೀಗಾಗಿ ಇಬ್ಬರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಗಳ ಉಪಟಳ ಸೋಮವಾರಪೇಟೆ ತಾಲೂಕಿನ ಹಲವೆಡೆ ತೀವ್ರಗೊಂಡಿರುವುದಕ್ಕೆ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.Sign in to your account
Username or Email Address


Password

 Remember Me


