ಮಡಿಕೇರಿ: ಕಾಫಿ ಉದ್ಯಮಿ ಅನುಮಾನಾಸ್ಪದ ರೀತಿಯಲ್ಲಿ ಕೊಲೆಯಾಗಿರು ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ.ಉದ್ಯಮಿ ಪ್ರವೀಣ್ ಪೂವಪ್ಪ (42) ರಕ್ತದ ಮಡುವಿನಲ್ಲಿ ಬಿದ್ದು ಕೊಲೆಯಾಗಿರುವ ವ್ಯಕ್ತಿ. ಕುವೆಂಪು ಬಡಾವಣೆಯ ಕೆ.ಪಿ.ಸುಗುಣಾ ಎಂಬುವರ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದ್ದು, ವಿವಾಹಿತ ಪ್ರವೀಣ್ ಜೊತೆಯಲ್ಲಿ ಪತ್ನಿ ವಾಸ ಇರಲಿಲ್ಲ ಎಂಬ ಮಾಹಿತಿ ಲಭಿಸಿದೆ.ಕಳೆದ ರಾತ್ರಿ ಕಾರಿನಲ್ಲಿ ಅಪರಿಚಿತರು ಮನೆಗೆ ಬಂದು ಹೋಗಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಘಟನೆ ಸಂಬಂಧ ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


