ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಮಗ ಟೆಕ್ಕಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದಂಪತಿ. ಇವರನ್ನು ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ.ಗೋವಿಂದಪ್ಪ ಅವರು ಆರ್ ಬಿಐ ನಿವೃತ್ತ ನೌಕರನಾಗಿದ್ದು, ಮಗ ನವೀನ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಂದೆ-ತಾಯಿಯನ್ನು ಕೊಲೆ ಮಾಡಿದ್ದು, ಕುಡಿದ ಮತ್ತಿನಲ್ಲಿ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ನವೀನ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.Sign in to your account
Username or Email Address


Password

 Remember Me


