ಚಿಕ್ಕಬಳ್ಳಾಪುರ: ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಚಿಕ್ಕಬಳ್ಳಾಪುರದ ಗೌರಿಬಿದನೂರು ನಗರದ ಕರೇಕಲ್ಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲಾ ಶಿಕ್ಷಕಿಯಾಗಿದ್ದ ಜ್ಯೋತಿ (33) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಕ್ಷಕಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಬಹುಶಃ ಅನಾರೋಗ್ಯ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಗೌರಿಬಿದನೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಹಾಗೂ ಮನೆಮಂದಿಯಿಂದ ಶಿಕ್ಷಕಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ.Sign in to your account
Username or Email Address


Password

 Remember Me


