ಬೆಂಗಳೂರು: ಲಾಕ್‍ಡೌನ್ ಆರಂಭವಾದ ದಿನಗಳಲ್ಲಿ ಬೆಂಗಳೂರು ತೊರೆದಿದ್ದ ಜನರು ನಗರಕ್ಕೆ ಆಗಮಿಸುತ್ತಿದ್ದು, ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ.ಬೆಂಗಳೂರಿನಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೋಟಿಸ್ ನೀಡಿದ್ದರಿಂದ ಜನರು ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ.ಲಾಕ್‍ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರು ಯಾವ ಭಾಗಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಮಾಹಿತಿ ಮಾತ್ರ ಲಭ್ಯವಾಗಿಲ್ಲ. ಕಂಟೈನ್‍ಮೆಂಟ್ ಝೋನ್ ನಲ್ಲಿಯ ಜನರು ಬೆಂಗಳೂರಿಗೆ ಬಂದ್ರೆ ಹೇಗೆ ಎಂಬ ಆತಂಕ ಸಹ ಮನೆ ಮಾಡಿದೆ.Sign in to your account
Username or Email Address


Password

 Remember Me


