ಚಿಕ್ಕೋಡಿ (ಬೆಳಗಾವಿ): ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದಿದೆ.ಜುಗುಳ ಗ್ರಾಮದ ಭರತ್ ಅಲಾಸೆ (46), ಮಗ ಪ್ರೇಮ್ ಅಲಾಸೆ (20) ಮೃತ ದುರ್ದೈವಿಗಳು. ಭರತ್ ಅವರು ತಮ್ಮ ಹೊಲದಿಂದ ಟ್ರ್ಯಾಕ್ಟರ್ ನಲ್ಲಿ ಮೇವು ತರುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಮೇಲೆ ಕುಳಿದಿದ್ದ ಭರತ್, ಪ್ರೇಮ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


