ಬೆಂಗಳೂರು: ಕೆ.ಆರ್.ಮಾರ್ಕೆಟ್ ಕಾರ್ಪೋರೇಟರ್ ನಾಜಿಮಾ ಖಾನ್ ಮೇಲಿನ ಹಲ್ಲೆ ಖಂಡಿಸಿ ಟಿಪ್ಪು ನಗರದ ಮಹಿಳೆಯರು ಕಂಟೈನ್‍ಮೆಂಟ್ ಝೋನ್ ಎಂಬುದನ್ನು ಮರೆತು ಪ್ರತಿಭಟನೆ ನಡೆಸಿದ್ದಾರೆ.ಶುಕ್ರವಾರ ಚಾಮರಾಜಪೇಟೆಯ ಇನ್‍ಸ್ಪೆಕ್ಟರ್ ಕುಮಾರಸ್ವಾಮಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾಜಿಮಾ ಖಾನ್ ಆರೋಪಿಸಿದ್ದರು. ಇಂದು ಪೊಲೀಸರು ವಿರುದ್ಧ ನಾಜಿಮಾ ಖಾನ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಶಾಸಕ ಜಮೀರ್ ಅಹಮದ್ ಬರುವಂತೆ ಆಗ್ರಹಿಸಿದ್ದಾರೆ.ಕಾರ್ಪೋರೇಟ್ ನಜಿಮಾ ಖಾನ್ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಕಂಟೈನ್‍ಮೆಂಟ್ ಝೋನ್ ನಲ್ಲಿ ಓಡಾಡಿದ್ದರು. ಕರ್ತವ್ಯದಲ್ಲಿದ್ದ ಇನ್‍ಸ್ಪೆಕ್ಟರ್ ನಜಿಮಾರ ಐಡಿ ಕಾರ್ಡ್ ವಶಕ್ಕೆ ಪಡೆದುಕೊಂಡಿದ್ದರು. ಆದ್ರೆ ಇನ್‍ಸ್ಪೆಕ್ಟರ್ ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ರು ಎಂದು ನಜಿಮಾ ಆರೋಪಿಸಿದ್ದಾರೆ.Sign in to your account
Username or Email Address


Password

 Remember Me


