ಕೋಲಾರ: ಕೊರೊನಾ ಟೆಸ್ಟ್ ಮಾಡಿದ ಬಳಿಕ ವರದಿ ನೀಡಲು ಸರ್ಕಾರಿ ಆಸ್ಪತ್ರೆಯ ವೈದ್ಯ ಮಹಿಳೆ ಬಳಿ ಹಣ ಪಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಶ್ರೀನಿವಾಸ್ ಮಹಿಳೆಯಿಂದ ಹಣ ಪಡೆದ ಲಂಚ ಬಾಕ ವೈದ್ಯ. ವೈದ್ಯ ಲಂಚ ಪಡೆಯುತ್ತಿರುವುದನ್ನು ಮಹಿಳೆಯೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಮಹಿಳೆ ಕೂಲಿ ಕೆಲಸಕ್ಕಾಗಿ ಕಲಬುರಗಿಯಿಂದ ಕೋಲಾರಕ್ಕೆ ಬಂದಿದ್ದು, ಲಾಕ್ ಡೌನ್ ನಂತರ ಕೋಲಾರ ಜಿಲ್ಲೆಯಲ್ಲಿ ಕೆಲ ಕಂಪನಿಗಳು ಪ್ರಾರಂಭವಾಗಿರುವ ಹಿನ್ನೆಲೆ, ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿಕೊಂಡು ವರದಿ ತರುವಂತೆ ಕಂಪನಿಯವರು ಸೂಚಿಸಿದ್ದಾರೆ. ಈ ಹಿನ್ನೆಲೆ ಮಹಿಳೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಆಸ್ಪತ್ರೆಗೆ ತೆರಳಿದ್ದಾರೆ.ಮಾಲೂರಿನ ಸರ್ಕಾರಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡಿದ್ದು, ಈ ವೇಳೆ ವರದಿ ನೀಡಲು ವೈದ್ಯ ಶ್ರೀನಿವಾಸ್ ಮಹಿಳೆಯಿಂದ 500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. 500 ರೂ. ಕೇಳಿ 200 ರೂ. ಹಣ ಪಡೆದಿದ್ದಾನೆ. ಹಣ ಪಡೆಯುವ ದೃಶ್ಯವನ್ನು ಸ್ವತಃ ಮಹಿಳೆಯೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಈ ಸರ್ಕಾರಿ ಆಸ್ಪತ್ರೆ ವೈದ್ಯ ಹಣ ನೀಡಿದರೆ ಮಾತ್ರ ಕೊರೊನಾ ಪರೀಕ್ಷೆಯ ವರದಿ ನೀಡುತ್ತಿದ್ದಾನೆ. ಹೀಗಾಗಿ ಸರ್ಕಾರಿ ಆಸ್ಪತ್ರೆ ವೈದ್ಯನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದು, ವೈದ್ಯನ ಅಮಾನತಿಗೆ ಆಗ್ರಹಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


