ಮಂಡ್ಯ: ಗಂಡ-ಹೆಂಡತಿ ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ತೆಲೆಗೆ ಕೊಡಲಿ ಏಟು ಬಿದ್ದಿದ್ದು, 14 ಹೊಲಿಗೆ ಹಾಕಿಸಿಕೊಂಡಿದ್ದಾರೆ.ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹರೆಕಲ್ಲ ದೊಡ್ಡಿಯಲ್ಲಿ ಘಟನೆ ನಡೆದಿದ್ದು, ದಂಪತಿಗಳ ಜಗಳ ಬಿಡಿಸಲು ಹೋಗಿದ್ದ ಪೇದೆ ತಲೆಗೆ ಕೊಡಲಿ ಪೆಟ್ಟು ಬಿದ್ದಿದೆ. ಶನಿವಾರ ಗ್ರಾಮದ ವೆಂಕಟರಾಮು- ಆಶಾ ದಂಪತಿ ಜಗಳವಾಡಿಕೊಂಡಿದ್ದಾರೆ. ದೂರು ಬಂದ ಹಿನ್ನೆಲೆ ಮುಖ್ಯ ಪೇದೆ ಗುರುಶಾಂತಪ್ಪ ಜಗಳ ಬಿಡಿಸಲು ತೆರಳಿದ್ದು, ಈ ವೇಳೆ ಪಾನಮತ್ತನಾಗಿದ್ದ ಪತಿ ವೆಂಕಟರಾಮು ಪೇದೆಗೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ.ತೀವ್ರವಾಗಿ ಗಾಯಗೊಂಡ ಪೇದೆಯನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ದಂಪತಿಯನ್ನು ಬಂಧಿಸಿರುವ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ.Sign in to your account
Username or Email Address


Password

 Remember Me


