ಬೆಂಗಳೂರು: ಲಾಕ್‍ಡೌನ್ ಸಮಯದಲ್ಲಿ ಎಲ್ಲ ನಟ, ನಟಿಯರು ಮನೆಯಲ್ಲೇ ಕಾಲ ಕಳೆಯುತ್ತಿದ್ದು, ಕುಟುಂಬದೊಂದಿಗೆ ಸಂತಸ ಕ್ಷಣಗಳನ್ನು ಆನಂದಿಸುತ್ತಿದ್ದಾರೆ. ಕಿಚ್ಚ ಸುದೀಪ್ ತಮ್ಮ ಮನೆಯಲ್ಲೇ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದು, ತಂದೆ ತಾಯಿಯ ವಿವಾಹ ವಾರ್ಷಿಕೋತ್ಸಕ್ಕೆ ಶುಭ ಕೋರಿದ್ದು, ಭಾವನಾತ್ಮಕ ಸಾಲುಗಳ ಮೂಲಕ ಟ್ವೀಟ್ ಮಾಡಿದ್ದಾರೆ.ಅವರು ನನ್ನನ್ನು ರೂಪಿಸಿದವರು, ಬೆಳೆಸಿದವರು, ಬಿಗಿಗೊಳಿಸಿದವರು, ಅಂದವಾಗಿಸಿದವರು. ಇಷ್ಟು ಮಾತ್ರವಲ್ಲ ನನ್ನನ್ನು ಆಶೀರ್ವದಿಸಿ, ನನಗಾಗಿ ಪ್ರಾರ್ಥಿಸುವವರು. ಅಮ್ಮ-ಅಪ್ಪ 54 ವರ್ಷಗಳ ನಿಮ್ಮ ಒಗ್ಗಟ್ಟಿನ ಜೀವನಕ್ಕೆ ಶುಭಾಶಯ. ನೀವು ಇನ್ನೂ ಹಲವು ವರ್ಷಗಳ ಕಾಲ ನಮ್ಮೊಂದಿಗೆ ಇರಬೇಕಿದೆ. ಲವ್ ಯು ಬೋತ್ ಫಾರ್‍ಎವರ್ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ತಂದೆ, ತಾಯಿಯನ್ನು ನೆನೆದಿದ್ದಾರೆ.They made me,,they grew me,
They taught me,,they groomed me,
They bless me,,they pray for me.Happy 54 years of togetherness Amma Appa. Need many more years of u wth us.
Luv u both forever.???????? pic.twitter.com/vxYDvWLbvG— Kichcha Sudeepa (@KicchaSudeep) May 6, 2020ಮನೆಯಲ್ಲೇ ಕಾಲ ಕಳೆಯುತ್ತಿರುವ ಕಿಚ್ಚ ಸುದೀಪ್, ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುತ್ತಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಅವರ ಅಭಿಮಾನಿಗಳು ಮಾಡುವ ಸಹಾಯದ ಕುರಿತು ಪ್ರತಿಕ್ರಿಯಿಸುತ್ತಿರುತ್ತಾರೆ. ಅಲ್ಲದೆ ಹಲವು ಅಭಿಮಾನಿಗಳ ಪ್ರಶ್ನೆಗೆಗಳಿಗೆ ಉತ್ತರಿಸುತ್ತಿದ್ದಾರೆ. ಹೀಗೆ ಲಾಕ್‍ಡೌನ್ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗುತ್ತಿದ್ದಾರೆ.ಕೋಟಿಗೊಬ್ಬ-3 ಸಿನಿಮಾದಲ್ಲಿ ಕಿಚ್ಚ ಸುದೀಪ್ ಬ್ಯುಸಿಯಾಗಿದ್ದು, ಸಿನಿಮಾ ಅಂತಿಮ ಹಂತ ತಲುಪಿದೆ. ಇನ್ನೇನು ಬಿಡುಗಡೆಯಾಗಲಿದೆ ಎನ್ನುವಷ್ಟರಲ್ಲಿ ಲಾಕ್‍ಡೌನ್ ಘೋಷಣೆಯಾಯಿತು. ಹೀಗಾಗಿ ಸಿನಿಮಾ ಬಿಡುಗಡೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಚಿತ್ರವನ್ನು ಶಿವ ಕಾರ್ತಿಕ್ ನಿರ್ದೇಶಿಸುತ್ತಿದ್ದು, ಕಿಚ್ಚನಿಗೆ ಜೋಡಿಯಾಗಿ ಮೆಡೋನ್ನ ಸೆಬಾಸ್ಟಿಯನ್ ನಟಿಸುತ್ತಿದ್ದಾರೆ. ಶ್ರದ್ಧಾ ದಾಸ್ ಇಂಟರ್‍ಪೋಲ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಕ್‍ಲೈನ್ ವೆಂಕಟೇಶ್ ಹಾಗೂ ಎಂ.ಬಿ ಬಾಬು ಚಿತ್ರವನ್ನು ನಿರ್ಮಿಸುತ್ತಿದ್ದಾರೆ.Sign in to your account
Username or Email Address


Password

 Remember Me


