ಧಾರವಾಡ: ಕೋವಿಡ್ ಟೆಸ್ಟಿಂಗ್ ಲ್ಯಾಬ್‍ನಲ್ಲಿ ಮಹಿಳಾ ಸಿಬ್ಬಂದಿಯ ಮೇಲೆ ಕಿರುಕುಳ ನಡೆದಿರುವ ಆರೋಪ ಕೇಳಿ ಬಂದಿದೆ.ಧಾರವಾಡದ ಡಿಮ್ಹಾನ್ಸ್ ನಲ್ಲಿರುವ ಕೋವಿಡ್ ಟೆಸ್ಟಿಂಗ್ ಲ್ಯಾಬ್‍ನ ಮಹಿಳಾ ಸಿಬ್ಬಂದಿಯೊಬ್ಬರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕನಾಗಿರುವ ತಂತ್ರಜ್ಞನ ಮೇಲೆ ಈ ಆರೋಪ ಮಾಡಿದ್ದಾರೆ. ಕರ್ನಾಟಕ ವಿವಿಯ ಈ ಪ್ರಾಧ್ಯಾಪಕರನ್ನು ಡಿಮ್ಹಾನ್ಸ್ ನಲ್ಲಿರುವ ಕೋವಿಡ್ ಲ್ಯಾಬ್‍ಗೆ ಕಳೆದ 15 ದಿನಗಳಿಂದ ಅಧಿಕಾರಿಯನ್ನಾಗಿ ನಿಯೋಜನೆ ಮಾಡಲಾಗಿತ್ತು.ಈ ಹಿನ್ನೆಲೆ ಇಬ್ಬರು ಇದೇ ಲ್ಯಾಬ್‍ನಲ್ಲಿ ಕೆಲಸ ಮಾಡುವ ವೇಳೆ ನನಗೆ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಪ್ರಾಧ್ಯಾಪಕನ ಮೇಲೆ ಮಹಿಳೆ ಆರೋಪ ಮಾಡಿದ್ದಾರೆ. ಈ ಸಂಬಂಧ ಡಿಮ್ಹಾನ್ಸ್ ನಿರ್ದೇಶಕ ಮತ್ತು ಕರ್ನಾಟಕ ವಿವಿ ಕುಲಪತಿಗೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಡಿಮ್ಹಾನ್ಸ್ ನಿರ್ದೇಶಕರಿಂದ ಕಮಿಟಿ ರಚನೆ ಮಾಡಲಾಗಿದ್ದು, ಪ್ರಾಥಮಿಕ ಹಂತದ ವಿಚಾರಣೆ ಪೂರ್ಣಗೊಳಿಸಿರುವ ಕಮಿಟಿ, ಪ್ರಕರಣ ಕುರಿತು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಿದೆ.Sign in to your account
Username or Email Address


Password

 Remember Me


