ಬೆಳಗಾವಿ: ಜಿಲ್ಲಾಧಿಕಾರಿ ನಿವಾಸದಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.ಪ್ರಕಾಶ್(30) ಆತ್ಮಹತ್ಯೆ ಮಾಡಿಕೊಂಡ ಸಿಟಿ ರಿಸರ್ವ್ ಪೊಲೀಸ್ ಪೇದೆ. ಈ ಘಟನೆ ಬೆಳಗಾವಿ ಜಿಲ್ಲಾಧಿಕಾರಿ ಎಸ್‍ಬಿ ಬೊಮ್ಮನಹಳ್ಳಿಯವರ ವಿಶ್ವೇಶ್ವರಯ್ಯ ನಗರದಲ್ಲಿರುವ ನಿವಾಸದಲ್ಲಿ ನಡೆದಿದೆ.ಪ್ರಕಾಶ್ ಸೆಕ್ಯೂರಿಟಿ ರೂಮ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದ ಒತ್ತಡ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗುತ್ತಿದೆ.ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ, ಡಿಸಿ ಎಸ್‍ಬಿ ಬೊಮ್ಮನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


