ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ 43 ದಿನಗಳಿಂದ ಮದ್ಯ ಸಿಗದೆ ಪರದಾಡಿದ್ದ ಕುಡುಕರು ಸೋಮವಾರ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮದ್ಯ ಸೇವಿಸಿ ಸುಮ್ಮನಿರದ ಕೆಲವರು ಕೊಲೆ, ಹಲ್ಲೆಗೆ ನಡೆಸಿರುವ ಘಟನೆಗಳು ವರದಿಯಾಗುತ್ತಲೇ ಇವೆ.ಇಂತಹದ್ದೇ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಕಾಮಾಕ್ಷಿಪಾಳ್ಯದ ಆದಿತ್ಯ ಬಾರ್ ಮುಂದೆ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಎಣ್ಣೆ ಪಾರ್ಟಿಯಲ್ಲಿ ಲವ್ ಮ್ಯಾಟರ್- ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಂದ್ರುಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕಾಮಾಕ್ಷಿಪಾಳ್ಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕುಡಿದ ಮತ್ತಿನಲ್ಲಿ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕುಡುಕನಿಂದ ವೈದ್ಯರ ಮೇಲೆ ಹಲ್ಲೆ, ಪೊಲೀಸ್ ಜೀಪ್ ಕೆಳಗೆ ಮಲಗಿ ರಂಪಾಟSign in to your account
Username or Email Address


Password

 Remember Me


