ಬೆಂಗಳೂರು: ಬೇಗೂರು ಪೊಲೀಸ್ ಠಾಣೆಯ ಕೊರೊನಾ ಸೋಂಕಿತ ಪೇದೆಯ ಅತ್ತಿಗೆಯ ವೈದ್ಯಕೀಯ ವರದಿ ಕೊರೊನಾ ನೆಗೆಟಿವ್ ಬಂದಿದೆ. ಪೇದೆಯ ಅತ್ತಿಗೆ ವೈದ್ಯೆಯಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್-19 ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಕೊರೊನಾ ರೋಗಿ ನಂ.650ರ ಅತ್ತಿಗೆ ಅಂತಾ ಗೊತ್ತಾದ ತಕ್ಷಣವೇ ವೈದ್ಯಾಧಿಕಾರಿಗಳು ಕೋವಿಡ್ ಟೆಸ್ಟ್ ಮಾಡಿಸಿದ್ದರು. ಇಂದು ವರದಿಯಲ್ಲಿ ಕೋವಿಡ್-19 ನೆಗೆಟಿವ್ ಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ನಿರಾಳರಾಗಿದ್ದಾರೆ. ಒಂದು ವೈದ್ಯೆಗೆ ಕೊರೊನಾ ಪಾಸಿಟಿವ್ ಬಂದಿದ್ರೆ ಇಡೀ ಆಸ್ಪತ್ರೆಯನ್ನ ಕ್ವಾರಂಟೈನ್ ಮಾಡುವ ಸನ್ನಿವೇಶ ಸೃಷ್ಟಿಯಾಗುತ್ತಿತ್ತು.ಅಪಘಾತದಿಂದ ಮನೆಯಲ್ಲಿರುವ ಪೊಲೀಸ್ ಪೇದೆಗೆ ಅತ್ತಿಗೆಯಿಂದಲೇ ಸೋಂಕು ತಗುಲಿದೆ ಎಂದು ಶಂಕಿಸಲಾಗಿತ್ತು. ಆದರೆ ಅತ್ತಿಗೆಗೆ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಪೇದೆಯ ಪ್ರಕರಣ ಮತ್ತಷ್ಟು ಕಗ್ಗಂಟಾಗಿದೆ. ಇದೀಗ ಪೇದೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 9 ಜನರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 45 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.Sign in to your account
Username or Email Address


Password

 Remember Me


