ಬೆಂಗಳೂರು: ಸುಮಾರು ಒಂದೂವರೆ ತಿಂಗಳ ನಂತರ ಕರ್ನಾಟಕ ಲಾಕ್‍ಡೌನ್‍ನಿಂದ ಸಡಿಲಿಕೆ ಆಗಿದೆ. ಆದರೆ ಲಾಕ್‍ಡೌನ್ ಸಡಿಲಿಕೆ ಮೊದಲ ದಿನವೇ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ.ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಫ್ಲಾಟ್ ಫಾರಂ ನಂಬರ್ 15ರಲ್ಲಿ ಈ ಅಪಘಾತ ಸಂಭವಿಸಿದ್ದು, ಕೊಪ್ಪಳ ಘಟಕ ಬಸ್‍ನಿಂದ ಅಪಘಾತವಾಗಿದೆ.ಲಾಕ್‍ಡೌನ್ ಸಡಿಲಿಕೆಯಾದ ಪರಿಣಾಮ ಸಾವಿರಾರು ಜನರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದಾರೆ. ಹೀಗಾಗಿ ಜನಸಂಖ್ಯೆ ಜಾಸ್ತಿ ಆದ ಪರಿಣಾಮ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹೊರಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.ಡಿಕ್ಕಿಯ ರಭಸಕ್ಕೆ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಸ್ಥಳದಿಂದ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಪಘಾತವಾಗಿ ರಕ್ತ ಚೆಲ್ಲಿದ ಜಾಗಕ್ಕೆ ಮಣ್ಣು ಹಾಕಿ ಮುಚ್ಚಲಾಗಿದೆ. ಇತ್ತ ಅಪಘಾತವಾಗುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಓಡಿ ಹೋಗಿದ್ದಾನೆ.Sign in to your account
Username or Email Address


Password

 Remember Me


