ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಕೊರೊನಾ ಹೊಡೆತಕ್ಕೆ ದಾವಣಗೆರೆ ಜನ ಆತಂಕಕ್ಕೆ ಒಳಗಾಗಿದ್ದಾರೆ. ಇಂದು ಬೆಳಗ್ಗೆ 5 ಪ್ರಕರಣಗಳು ಬೆಳಕಿಗೆ ಬಂದಿದ್ದವು. ದಾವಣಗೆರೆಯ 21 ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 627ಕ್ಕೆ ಏರಿಕೆಯಾಗಿದೆ.ಜಿಲ್ಲಾಡಳಿತ ಕಳುಹಿಸಿದ 94 ಸ್ಯಾಂಪಲ್ ಗಳ ಪೈಕಿ 21 ಮಂದಿಗೆ ಸೋಂಕು ತಗುಲರೋದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸಂಖ್ಯೆ 31ಕ್ಕೆ ಏರಿಕೆಯಗಿದೆ. ಯಾರಿಂದ ಈ 21 ಮಂದಿಗೆ ಸೋಂಕು ತಗುಲಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.ರಾಜ್ಯ ಆರೋಗ್ಯ ಇಲಾಖೆ ಬೆಳಗ್ಗೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಇಂದು ಕಲಬುರಗಿಯ ಮೂವರಿಗೆ, ಬಾಗಲಕೋಟೆಯ ಇಬ್ಬರಿಗೆ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಅವರನ್ನು ಈಗಾಗಲೇ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.Sign in to your account
Username or Email Address


Password

 Remember Me


