ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಂಟೈನ್‍ಮೆಂಟ್ ಝೋನ್ ಗಳ ಸಂಖ್ಯೆ 25ರಿಂದ 22ಕ್ಕೆ ಇಳಿಕೆಯಾಗಿದೆ. ಕೆಂಪು ವಲಯವನ್ನ ತೆಗೆದು ನೇರಳೆ ಮತ್ತು ಕಡು ನೇರಳೆ ಎರಡು ವಲಯಗಳನ್ನ ಬಿಬಿಎಂಪಿ ವಿಂಗಡನೆ ಮಾಡಿದೆ. ಹೊರಮಾವು, ಗುರಪ್ಪನ ಪಾಳ್ಯ ಮತ್ತು ಜೆಪಿ ನಗರವನ್ನು ಕಂಟೈನ್‍ಮೆಂಟ್ ಝೋನ್ ನಿಂದ ಕೈ ಬಿಡಲಾಗಿದೆ.ಎಲ್ಲ ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಒಂದೇ ಪರಿಸ್ಥಿತಿ ಇಲ್ಲ. ಕಂಟೈನ್‍ಮೆಂಟ್ ಝೋನ್‍ಗಳನ್ನು ಬಿಬಿಎಂಪಿ ನೇರಳೆ ಮತ್ತು ಕಡು ನೇರಳೆ ಎಂದು ವಿಂಗಡನೆ ಮಾಡಿಕೊಂಡಿದೆ. ಇದನ್ನು ಸೋಂಕಿನ ತೀವ್ರತೆಯ ಆಧಾರದ ಮೇಲೆ ವಿಂಗಡನೆ ಮಾಡಲಾಗಿದೆ.ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ನಿವೃತ್ತಿ ಹೊಂದಿರೋ ಆರೋಗ್ಯ ಇಲಾಖೆ ವೈದ್ಯಕೀಯ, ಅರೆ ವೈದ್ಯಕೀಯ, ಕ್ಲಿನಿಕಲ್, ನಾನ್ ಕ್ಲಿನಿಕಲ್ ಸಿಬ್ಬಂದಿ, ನೌಕರರ ಸೇವಾ ಅವಧಿಯನ್ನು ಸರ್ಕಾರ ಮುಂದುವರಿಕೆ ಮಾಡಿದೆ. ಇವರೆಲ್ಲರ ಸೇವಾವಧಿ ಜೂನ್ 30ಕ್ಕೆ ಅಂತ್ಯವಾಗಲಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.Sign in to your account
Username or Email Address


Password

 Remember Me


