ಹುಬ್ಬಳ್ಳಿ: ಮಹಾಮಾರಿ ಕೊರೊನಾದಿಂದ ಗುಣಮುಖರಾಗಿರುವ ಇಬ್ಬರು ಮಕ್ಕಳನ್ನು ಹುಬ್ಬಳ್ಳಿಯ ಕಿಮ್ಸ್‌ನಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದ ರೋಗಿ 234 ಗಂಡು ಮಗು ಮತ್ತು 235 7 ವರ್ಷದ ಬಾಲಕಿ ಇಬ್ಬರೂ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ನೆಗೆಟಿವ್ ವರದಿ ಬಂದಿದೆ.ಅಷ್ಟೇ ಅಲ್ಲದೇ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ಕೂಡ ವೈದ್ಯರು ದೃಢಪಡಿಸಿದ್ದರಿಂದ ಈ ಇಬ್ಬರೂ ಮಕ್ಕಳನ್ನು ಬಿಡುಗಡೆ ಮಾಡಲಾಗಿದೆ. ಈ ಮಕ್ಕಳ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದ ಇವರ ತಾಯಿಗೆ ಕೊರೊನಾ ಸೋಂಕು ತಗುಲಿರಲಿಲ್ಲ. ಆದರೂ ಪರೀಕ್ಷಿಸಿ ಮಾಡಿದ್ದು, ನೆಗೆಟಿವ್ ವರದಿ ಬಂದ ನಂತರ ಮಕ್ಕಳೊಂದಿಗೆ ತಾಯಿಯನ್ನು ಕೂಡ ಕಳುಹಿಸಿಕೊಡಲಾಯಿತು.ಜಿಲ್ಲೆಯಲ್ಲಿ ಇದುವರೆಗೆ ನಾಲ್ವರು ಕೊರೊನಾ ವೈರಸ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಆರು ಜನರು ಕಿಮ್ಸ್‌ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಿಸಿ ತಿಳಿಸಿದರು.Sign in to your account
Username or Email Address


Password

 Remember Me


