ಮಡಿಕೇರಿ: ಈಜಲು ತೆರಳಿದ್ದ ವೇಳೆ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನ ಬಳಿ ನಡೆದಿದೆ.ಸೋಮವಾರಪೇಟೆ ತಾಲೂಕಿನ ಬೆಸ್ಸೂರಿನ ನಿವಾಸಿಗಳಾದ ಸೈನಿಕ ಲೋಕೇಶ್ (30) ಹಾಗೂ ಲತೇಶ್ (27) ನೀರಿನಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿಗಳು. ಇಬ್ಬರೂ ಮಧ್ಯಾಹ್ನ ಹೇಮಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದರು.ಉತ್ತರಾಖಂಡ್‍ನಲ್ಲಿ ಸೈನಿಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್‍ಗೆ ವಾರದ ಹಿಂದೆಯಷ್ಟೇ ಹಾಸನ ಮೂಲದ ಯುವತಿ ಜೊತೆಗೆ ನಿಶ್ಚಿತಾರ್ಥವಾಗಿತ್ತು. 2009ರಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನೀರಿನಲ್ಲಿ ಮುಳುಗಿರುವ ಲತೇಶ್ ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ತೀವ್ರ ಶೋಧ ಮುಂದುವರೆಸಿದ್ದಾರೆ. ಸ್ಥಳಕ್ಕೆ ಶನಿವಾರಸಂತೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


