ಶಿವಮೊಗ್ಗ: ಉಸಿರಾಟದ ತೊಂದರೆಯಿಂದ ಒಂದು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಪಟ್ಟಣದಲ್ಲಿ ನಡೆದಿದೆ.ಮಗುವಿನ ಪೋಷಕರು ಸಾಗರ ತಾಲೂಕಿನ ಕಳಸವಳ್ಳಿ ಕ್ಯಾಂಪಿನಲ್ಲಿ ವಾಸವಾಗಿದ್ದಾರೆ. ಕೆಲಸಕ್ಕಾಗಿ ಬಂದು ಇಲ್ಲಿಯೇ ಉಳಿದುಕೊಂಡಿದ್ದರು. ಕಳೆದ ಮೂರು ದಿನಗಳಿಂದ ಮಗುವಿನ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಹಾಗಾಗಿ ಪೋಷಕರು ತಮ್ಮ ಮೂರು ವರ್ಷ ಹೆಣ್ಣು ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು.ಹೆಣ್ಣು ಮಗು ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ವೈದ್ಯರು ಮುನ್ನೆಚ್ಚರಿಕ ಕ್ರಮವಾಗಿ ಮಗುವನ್ನು ಕೊರೊನಾ ಚಿಕಿತ್ಸೆಗೆ ಒಳಪಡಿಸಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮುದ್ದು ಕಂದಮ್ಮ ಸಾವನ್ನಪ್ಪಿದೆ. ಆದ್ರೆ ಮಗುವಿನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈದ್ಯರು ಮಗುವಿನ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ.Sign in to your account
Username or Email Address


Password

 Remember Me


