ಮಂಡ್ಯ: ಕ್ವಾರಂಟೈನ್ ಮಾಡೋದು ಅವಮಾನ ಅಲ್ಲ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ಸಂಸದೆ ಸುಮಲತಾ ತಿಳಿ ಹೇಳಿದ್ದಾರೆ.ಆಶಾ ಕಾರ್ಯಕರ್ತೆಗೆ ಕ್ವಾರಂಟೈನ್ ಮಾಡಿದ್ದಾರೆ. ಮೊದಲೇ ಮನನೊಂದು ಆತ್ಮಹತ್ಯೆಗೆ ಆಶಾ ಕಾರ್ಯಕರ್ತೆ ಯತ್ನಿಸಿದ್ದರು. ಈಗ ಕ್ವಾರಂಟೈನ್ ಮಾಡಿ ಇನ್ನೊಂದು ಅವಮಾನ ಮಾಡಿದ್ದಾರೆ. ಕ್ವಾರಂಟೈನ್ ಮಾಡುವ ಅಗತ್ಯ ಏನಿತ್ತು? ನನಗೆ ಅವರು ಫೋನ್ ಮಾಡಿ ನೋವು ತೋಡಿಕೊಂಡಿದ್ದಾರೆ ಎಂದು ಶಾಸಕ ರವೀಂದ್ರ ಶೀಕಂಠಯ್ಯ ಅವರು ಮಂಡ್ಯದ ಜಿಲ್ಲಾ ಪಂಚಾಯತಿಯ ಸಭೆಯಲ್ಲಿ ಪ್ರಸ್ತಾಪಿಸಿದರು.ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅವರು, ಕ್ವಾರಂಟೈನ್ ಮಾಡೋದು ಅವಮಾನ ಅಂತ ತಿಳಿದುಕೊಳ್ಳೋದು ತಪ್ಪು. ಅರಿವು ಮೂಡಿಸಬೇಕಾದ ನಮ್ಮಂತ ಜನಪ್ರತಿನಿಧಿಗಳೇ ಅವಮಾನ ಎಂದು ಹೇಳಿದು ಸರಿಯಲ್ಲ. ಅವಮಾನ ಅಂತ ಹೇಳಿದರೆ ಬಹಳಷ್ಟು ಜನ ಹೆದರುತ್ತಾರೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಸಚಿವರಾದ ಡಾ.ಸುಧಾಕರ್, ನಾರಾಯಣಗೌಡ ಅವರು ಹಾಜರಿದ್ದರು.ಏನಿದು ಘಟನೆ: ಇತ್ತೀಚೆಗೆ ಮಂಡ್ಯ ಆಶಾ ಕಾರ್ಯಕರ್ತೆ ಮೇಲಾಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಸದಸ್ಯನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದರು. ಮಂಡ್ಯ ತಾಲೂಕಿನ ಕಾಗೇಹಳ್ಳ ದೊಡ್ಡಿ ಗ್ರಾಮದ ಅಂಗನವಾಡಿಯ ಆಶಾ ಕಾರ್ಯಕರ್ತೆ ಭಾಗ್ಯಮ್ಮ (45) ಆತ್ಮಹತ್ಯೆಗೆ ಯತ್ನಿಸಿದ್ದರು. ಮತದಾರರ ಪಟ್ಟಿಗೆ ಹೆಸರು ಸೇರಿಸುವ ಮತ್ತು ಪರಿಷ್ಕರಿಸುವ ಕೆಲಸಕ್ಕೆ ಭಾಗ್ಯಮ್ಮ ಅವರನ್ನು ನಿಯೋಜನೆ ಮಾಡಲಾಗಿತ್ತು. ಈ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರಿಸುವಂತೆ ಒತ್ತಡ ಹೇರಿದ್ದರು. ಇದಕ್ಕೆ ಭಾಗ್ಯ ಅವರು ನಿರಾಕರಿಸಿದರು ಎನ್ನಲಾಗಿತ್ತು. ಬಳಿಕ ರಾಜಕೀಯ ಪ್ರಭಾವ ಬಳಸಿ ಭಾಗ್ಯಮ್ಮ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ವಿಚಾರದಲ್ಲಿ ಮೇಲಾಧಿಕಾರಿಗಳು ಶಾಮೀಲಾಗಿ ಕಿರುಕುಳ ನೀಡುತ್ತಿದ್ದರು ಎಂದು ಭಾಗ್ಯಮ್ಮ ಹೇಳಿಕೊಂಡಿದ್ದರು ಎನ್ನಲಾಗಿತ್ತು. ಆತ್ಮಹತ್ಯೆ ಪ್ರತ್ನಿಸಿದ್ದ ಭಾಗ್ಯಮ್ಮ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದರು. ಆದ್ದರಿಂದ ಅವರಿಗೆ ಮನೆಯಲ್ಲೇ ಉಳಿದುಕೊಳ್ಳುವಂತೆ ಕ್ವಾರಂಟೈನ್ ಮಾಡಲಾಗಿದೆ ಎಂದು ಶಾಸಕರು ಪ್ರಶ್ನಿಸಿದ್ದರು.Sign in to your account
Username or Email Address


Password

 Remember Me


