ಹುಬ್ಬಳ್ಳಿ: ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಆರೋಗ್ಯ ತಪಾಸಣೆಯನ್ನು ನಗರದ ಕಿಮ್ಸ್ ನ ಪಿಎಂಎಸ್‍ಎಸ್ ವೈ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಡಲಾಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪತ್ರಕರ್ತರಿಗೆ ಕೋವಿಡ್ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಟ್ಟದ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಗಂಟಲು ದ್ರವ ಸಂಗ್ರಹಿಸಲಾಯಿತು.
ರಾಜ್ಯದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಾಧ್ಯಮ ಪ್ರತಿನಿಧಿಗಳು ಕೂಡಾ ಸತತವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ಮಾಡುವಂತೆ ಒತ್ತಾಯಿಸಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.ಈ ಹಿನ್ನೆಲೆಯಲ್ಲಿ ಸಚಿವರ ಪತ್ರಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಮಾಧ್ಯಮ ಪ್ರತಿನಿಧಿಗಳ ಆರೋಗ್ಯ ತಪಾಸಣೆ ಮಾಡುವಂತೆ ವಾರ್ತಾ ಇಲಾಖೆಗೆ ನಿರ್ದೇಶನ ನೀಡಿದ್ದರು. ಇಂದು ಧಾರವಾಡ ಜಿಲ್ಲಾ ಮಟ್ಟದ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು. ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಡೊಳ್ಳಿನ ಸೇರಿದಂತೆ ಎಲ್ಲಾ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


