ಧಾರವಾಡ: ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.ಧಾರವಾಡದ ಹೊಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ ಕೈರಾನ್ ಸಾವನ್ನಪ್ಪಿದ ವಿದ್ಯಾರ್ಥಿ. ಉತ್ತರ ಕನ್ನಡ ಜಿಲ್ಲೆಯ ಮೂಲದವನಾದ ಸುದೀಪ್, ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದನು. ವಿದ್ಯಾಭ್ಯಾಸಕ್ಕಾಗಿ ಧಾರವಾಡದ ಹೊಯ್ಸಳ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದನು.ಲಾಕ್‍ಡೌನ್ ಪರಿಣಾಮ ಮದ್ಯ ಸಿಗದ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಜೊತೆ ಕೆಮ್ಮಿನ ಔಷಧಿ ಸೇವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಸ್ಯಾನಿಟೈಸರ್ ಮತ್ತು ಕೆಮ್ಮಿನ ಔಷಧಿ ಬಾಟಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಶವವನ್ನು ಧಾರವಾಡದ ಜಿಲ್ಲಾಸ್ಪತ್ರೆಯ ಶವಾಗರದಲ್ಲಿ ಇರಿಸಲಾಗಿದೆ.Sign in to your account
Username or Email Address


Password

 Remember Me


