ಮಂಡ್ಯ: ಕೋವಿಡ್_19 ಟೆಸ್ಟ್ ನಡೆಸದಂತೆ ಜೆಡಿಎಸ್ ಎಂಎಲ್‌ಸಿ ಕಿರಿಕ್ ಮಾಡಿದ ಘಟನೆ ಇಂದು ಮಂಡ್ಯದಲ್ಲಿ ನಡೆದಿದೆ.ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರ ಕೋವಿಡ್ 19 ಟೆಸ್ಟ್ ಇತ್ತು. ಆದರೆ ಅಂಬೇಡ್ಕರ್ ಭವನದ ಬಳಿಯೇ ವಿಧಾನಸಭಾ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಅವರ ಮನೆಯಿದೆ. ಹೀಗಾಗಿ ಇಲ್ಲಿ ಟೆಸ್ಟ್ ಮಾಡಬೇಡಿ ಎಂದು ತನ್ನ ಸಂಗಡಿಗರನ್ನು ಕರೆದುಕೊಂಡು ಬಂದು ಖ್ಯಾತೆ ತೆಗೆದಿದ್ದಾರೆ. ಅಲ್ಲದೆ ಕೋವಿಡ್ ಟೆಸ್ಟ್ ನಿಲ್ಲಿಸುವಂತೆ  ಅವಾಜ್ ಹಾಕಿದ್ದಾರೆ.ಇದೇ ವೇಳೆ ಕೆಟಿಎಸ್ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಕೆಟಿಎಸ್ ನಡೆದುಕೊಂಡ ರೀತಿ ಕಾನೂನು ಬಾಹಿರ ಹಾಗೂ ಅಕ್ಷಮ್ಯ ಅಪರಾಧವಾಗಿದೆ. ಈ ಸಂಬಂಧ ದೂರು ಪರಿಶೀಲಿಸಿ ಎಫ್‍ಐಆರ್ ದಾಖಲಿಸಲು ನಿರ್ಧಾರ ಮಾಡುವುದಾಗಿ ತಿಳಿಸಿದ್ದಾರೆ. ಸದ್ಯ ಕೆಟಿಎಸ್ ಪುತ್ರನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.Sign in to your account
Username or Email Address


Password

 Remember Me


