ಬೆಂಗಳೂರು: ಲಾಕ್‍ಡೌನ್ ನಡುವೆಯೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಕದ್ದಿದ್ದಾರೆ.ಪಾದರಾಯನಪುರದಲ್ಲಿ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರನ್ನು ತಡೆದು ಪೊಲೀಸರು ವಾಪಸ್ ಕಳುಹಿಸುತ್ತಿದ್ದರು. ಈ ವೇಳೆ ಕೆಲವರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ರು. ಈ ಸಮಯದಲ್ಲಿಯೇ ಕಳ್ಳ ಪೇದೆಗಳಿಬ್ಬರ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ. ಸದ್ಯ ಕಳ್ಳತನ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.ಲಾಕ್‍ಡೌನ್ ಇದ್ರೂ ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚು ಬೈಕ್ ಗಳು ರಸ್ತೆಗಿಳಿದಿವೆ. ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅನಾವಶ್ಯಕವಾಗಿ ಓಡಾಡ್ತಿರುವ ವಾಹನಗಳನ್ನ ಸೀಜ್ ಮಾಡಿದ್ದಾರೆ. ಹೆದ್ದಾರಿಯಲ್ಲಿ ಒಂದೊಂದೆ ವಾಹನಗಳನ್ನು ತಪಾಸಣೆ ಮಾಡುತ್ತಿರುವದರಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ವಾತಾವರಣ ನಿರ್ಮಾಣವಾಗಿದೆ.Sign in to your account
Username or Email Address


Password

 Remember Me


