ಕಲಬುರಗಿ: ಕೊರೊನಾ ವೈರಸ್ ಭೀತಿಯಿಂದ ದಾಖಲಿಸಿಕೊಳ್ಳಲು ಸಿಬ್ಬಂದಿ ಹಿಂದೇಟು ಹಾಕಿದ ಪರಿಣಾಮ ಮಹಿಳೆಯೊಬ್ಬರು ಆಸ್ಪತ್ರೆ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಚೆನ್ನಮ್ಮ ಅವರು ಪ್ರಸವ ವೇದನೆಯಿಂದ ಜಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಅಲ್ಲಿನ ಸಿಬ್ಬಂದಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದಾರೆ. ಪರಿಣಾಮ ಚೆನ್ನಮ್ಮ ಅವರಿಗೆ ಆಸ್ಪತ್ರೆಯ ಮುಂಭಾಗವೇ ಹೆರಿಗೆಯಾಗಿದೆ.ಮಗುವಿಗೆ ಜನ್ಮ ನೀಡಿದ ಗಂಟೆಗಳ ಬಳಿಕ ಕೂಡ ಸಿಬ್ಬಂದಿ ದಾಖಲು ಮಾಡಿಕೊಳ್ಳಲು ಮುಂದಾಗಲಿಲ್ಲ. ಇದರಿಂದ ಸಿಟ್ಟಿಗೆದ್ದ ಸಾರ್ವಜನಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರ ಆಕ್ರೋಶದ ಬೆನ್ನಲ್ಲೇ ಸಿಬ್ಬಂದಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲುಮಾಡಿಕೊಂಡಿದ್ದಾರೆ.ಘಟನೆಯಿಂದಾಗಿ ಜಿಲ್ಲೆಯಲ್ಲಿ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಹೊರ ರೋಗಿಗಳನ್ನು ಚಿಕಿತ್ಸೆ ನೀಡಲು ಸಿಬ್ಬಂದಿ ಹಿಂದೇಟು ಹಾಕಿದ್ರಾ ಎಂಬ ಪ್ರಶ್ನೆ ಮೂಡಿದೆ.Sign in to your account
Username or Email Address


Password

 Remember Me


