ಹುಬ್ಬಳ್ಳಿ: ಐವರು ಮಾಧ್ಯಮ ಪ್ರತಿನಿಧಿಗಳು ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹುಬ್ಬಳ್ಳಿಯಲ್ಲಿ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.ನಗರದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಇವರು ಏಪ್ರಿಲ್ 9ರಂದು ಶಬ್ ಎ ಬರಾತ್ ಆಚರಣೆಯ ಕುರಿತು ವರದಿಗಾರಿಕೆಗಾಗಿ ಹುಬ್ಬಳ್ಳಿಯ ತೊರವಿಹಕ್ಕಲದ ಖಬರಸ್ತಾನಕ್ಕೆ ತೆರಳಿದ್ದರು.ಈ ಸ್ಮಶಾನದ ಕಾವಲುಗಾರನಿಗೆ (ಪಿ- 363) ಕೊರೊನಾ ಸೋಂಕು ಇರುವುದು ಏಪ್ರಿಲ್ 18 ರಂದು ದೃಢಪಟ್ಟತ್ತು. ಈ ಹಿನ್ನೆಲೆಯಲ್ಲಿ ಈ ಎಲ್ಲ ಐವರು ಪ್ರತಿನಿಧಿಗಳನ್ನು ದ್ವಿತೀಯ ಹಂತದ ಸಂಪರ್ಕಿತರು ಎಂದು ಪರಿಗಣಿಸಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ. ಈ ಐದೂ ಜನ ಮಾಧ್ಯಮ ಪ್ರತಿನಿಧಿಗಳ ಆರೋಗ್ಯ ಸ್ಥಿರವಾಗಿದೆ.Sign in to your account
Username or Email Address


Password

 Remember Me


