ಹಾಸನ: ಹಗಲು ರಾತ್ರಿ ಕೊರೊನಾ ಕರ್ಫ್ಯೂಗಾಗಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಗೌರವ ಸಲ್ಲಿಸುವ ಸಲುವಾಗಿ ಎಂಎಲ್‍ಸಿ ಗೋಪಾಲಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ನೀಡಿ ಗೌರವ ಸಲ್ಲಿಸಿದ್ದಾರೆ.ಸರ್ಕಾರ ಈಗಾಗಲೇ ಎಲ್ಲರೂ ಮಾಸ್ಕ್ ಧರಿಸಿಯೇ ಹೊರಗಡೆ ಬರಬೇಕು ಎಂದು ಖಡಕ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಇಂದು ಎಂಎಲ್‍ಸಿ ಗೋಪಾಲಸ್ವಾಮಿ ಸುಮಾರು ಒಂದು ಲಕ್ಷ ಮಾಸ್ಕ್ ಅನ್ನು ಚನ್ನರಾಯಪಟ್ಟಣ ತಾಲೂಕಿನ ಜನರಿಗೆ ವಿತರಿಸುವ ವ್ಯವಸ್ಥೆ ಮಾಡಿದರು. ತಾಲೂಕಿನಲ್ಲಿ ಸುಮಾರು 75 ಸಾವಿರ ಪಡಿತರದಾರರಿದ್ದು ನ್ಯಾಯಬೆಲೆ ಅಂಗಡಿ ಮೂಲಕ ಪ್ರತಿಯೊಬ್ಬರಿಗೂ ಮಾಸ್ಕ್ ಸಿಗುವಂತೆ ತಾವೇ ಸ್ವತಃ ನ್ಯಾಯಬೆಲೆ ಅಂಗಡಿಗೆ ತೆರಳಿ ಮಾಸ್ಕ್ ಬಾಕ್ಸ್ ವಿತರಿಸಿದರು.ಅಷ್ಟೇ ಅಲ್ಲದೆ ಆಶಾ ಕಾರ್ಯಕರ್ತೆಯರು, ಪೊಲೀಸರು ಮತ್ತು ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗೆ ಪ್ರತಿಯೊಬ್ಬರಿಗೂ ತಲುಪುವಂತೆ ಸೂಚಿಸಿ ಅಧಿಕಾರಿಗಳಿಗೆ ಮಾಸ್ಕ್ ಬಾಕ್ಸ್ ಮತ್ತು ಸ್ಯಾನಿಟೈಸರ್ ವಿತರಣೆ ಮಾಡಿದರು.


 Advertisement 







 Advertisement 




Sign in to your account
Username or Email Address


Password

 Remember Me


