ಬೆಂಗಳೂರು: ಪಾದರಾಯನಪುರ ಪುಂಡರನ್ನು ಬಂಧಿಸಿರುವ ಪೊಲೀಸರಿಗೆ ಇದೀಗ ಕೊರೊನಾ ಆತಂಕ ಶುರುವಾಗಿದೆ.ಭಾನುವಾರ ಪಾದರಾಯನಪುರದ 58 ಮಂದಿ ಕೊರೊನಾ ಶಂಕಿತರನ್ನು ಬೇರೆಡೆ ಶಿಫ್ಟ್ ಮಾಡುವ ಸಂದರ್ಭದಲ್ಲಿ ಈ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ಕೊರೊನಾ ಸೋಂಕು ಶಂಕಿತರು ಭಾಗಿಯಾಗಿದ್ರು ಎನ್ನಲಾಗಿದ್ದು, ಪೊಲೀಸರಲ್ಲಿ ಆತಂಕ ಮನೆ ಮಾಡಿದೆ. ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಬಳಿಕ ರಾತ್ರಿಯೇ 54 ಜನರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.ಪುಂಡರ ಬಂಧನ ವೇಳೆ ಪೊಲೀಸರು ಅವರ ನೇರಸಂಪರ್ಕದಲ್ಲಿದ್ದರು. ಹಾಗಾಗಿ ನಮಗೆ ಕೊರೊನಾ ತಗುಲಿದೆಯಾ ಎಂಬ ಆತಂಕ ಪೊಲೀಸರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪಾದರಾಯನಪುರದಲ್ಲಿ ಕೆಲಸ ಮಾಡಿದ್ದ ಎಲ್ಲ ಸಿಬ್ಬಂದಿಗೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿಕೊಂಡು ಮನೆಗೆ ತೆರಳುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಡ್ಯೂಟಿ ಮುಗಿದ ಬಳಿಕ ಸ್ಯಾನಿಟೈಸ್ ಮಾಡಿಕೊಳ್ಳದೇ ಮನೆಗಳಿಗೆ ತೆರಳಕೂಡದು ಎಂದು ಸೂಚಿಸಲಾಗಿದೆ.Sign in to your account
Username or Email Address


Password

 Remember Me


