ಚಿಕ್ಕೋಡಿ (ಬೆಳಗಾವಿ): ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ.ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಬಂಧಿತರು. ಈ ಯುವಕರು ಕಲ್ಲಂಗಡಿ ಹಣ್ಣುಗಳನ್ನ ಚರಂಡಿಯಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ವಿಡಿಯೋವನ್ನು ನೋಡಿದ್ದ ನಿಪ್ಪಾಣಿಯ ಕೆಲವರು ಆರೋಪಿಗಳನ್ನು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳು ಈ ಕೃತ್ಯವನ್ನು ಮಾರ್ಚ್ 28ರಂದು ಎಸಗಿದ್ದು, ವಿಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.ಈ ಸಂಬಂಧ ಬಸವೇಶ್ವರ ಚೌಕ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನ ಬಂಧಿಸಿ ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.Sign in to your account
Username or Email Address


Password

 Remember Me


