ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಒಂದಿಲ್ಲೊಂದು ಫೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ತಾವು ಇಬ್ಬರು ಮಕ್ಕಳನ್ನು ನೋಡಿಕೊಳ್ಳುವ ಬಗ್ಗೆ ಹೇಳಿಕೊಂಡಿದ್ದಾರೆ.ರಾಧಿಕಾ ಪಂಡಿತ್ ಅವರಿಗೆ ಇಬ್ಬರು ಮಕ್ಕಳು. ಹೀಗಾಗಿ ತಮ್ಮ ಮಕ್ಕಳ ಜೊತೆ ಮನೆಯಲ್ಲಿ ಖುಷಿಯಿಂದ ಕಾಲಕಳೆಯುತ್ತಿದ್ದಾರೆ. ಕೆಲವರಿಗೆ ಒಂದು ಮಗು ನೋಡಿಕೊಳ್ಳುವುದೇ ಕಷ್ಟ ಎನ್ನಿಸುತ್ತದೆ. ಆದರೆ ರಾಧಿಕಾ ಅವರು ಇಬ್ಬರು ಪುಟ್ಟ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಸ್ವತಃ ರಾಧಿಕಾ ಅವರೇ ತಮ್ಮ ಮಕ್ಕಳನ್ನು ಹೇಗೆ ನೋಡಿಕೊಳ್ಳುತ್ತಿದ್ದೇನೆ ಎಂಬುದನ್ನು ಸೋಶಿಯಲ್ ಮಿಡಿಯಾದಲ್ಲಿ ತಿಳಿಸಿದ್ದಾರೆ.ರಾಧಿಕಾ ತಮ್ಮ ಅಪ್ಪ-ಅಪ್ಪ ಐರಾಳನ್ನು ಎತ್ತಿಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಅದಕ್ಕೆ “ನಾನು ಇಬ್ಬರು ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಿದ್ದೇನೆ ಎಂಬ ಬಗ್ಗೆ ಹಲವರು ಕುತೂಹಲ ಹೊಂದಿದ್ದಾರೆ ಎಂಬುದು ನನಗೆ ತಿಳಿದಿದೆ. ಈ ಫೋಟೋದಲ್ಲಿರುವ ಇಬ್ಬರನ್ನು ನೋಡಿ. ಇವರೇ ನನ್ನ ಸೀಕ್ರೆಟ್. ಇವರಿಂದ ನಾನು ವಿಶ್ರಾಂತಿ ಪಡೆಯುತ್ತೇನೆ” ಎಂದು ತಿಳಿಸಿದ್ದಾರೆ.https://www.facebook.com/RadhikaPandit/photos/a.914160455267178/3419731818043350/?type=3&theaterಅಲ್ಲದೇ “ಐರಾ ಮತ್ತು ಜೂನಿಯರ್ ಯಶ್ ಇವರಿಲ್ಲದೇ ಇರಲು ಸಾಧ್ಯವಿಲ್ಲ. ಅವರು ನನಗೆ ಮಮ್ಮಿ, ಅಪ್ಪಾ, ಆದರೆ ಐರಾ ಮತ್ತು ಜೂನಿಯರ್ ಯಶ್‍ಗೆ ಮಿಮಿ ಮತ್ತು ಅಜ್ಜು ಆಗಿದ್ದಾರೆ. ಐರಾ ತಮ್ಮ ಅಮ್ಮಮ್ಮಾನನ್ನು ಮಿಮಿ ಎಂದು ಕರೆಯುತ್ತಾಳೆ. ಯಾಕೆಂದರೆ ನಾನು ನನ್ನ ಅಮ್ಮನನ್ನು ಮಮ್ಮಿ ಎಂದು ಕರೆಯುತ್ತೇನೆ. ಅದನ್ನು ಕೇಳಿಸಿಕೊಂಡು ಐರಾ ಮಿಮಿ ಎಂದು ಕರೆಯುತ್ತಾಳೆ” ಎಂದು ಬರೆದುಕೊಂಡಿದ್ದಾರೆ.ಇತ್ತೀಚೆಗೆ ರಾಧಿಕಾ ತಮ್ಮ ಮಗಳು ಐಸ್ ಕ್ರೀಮ್ ತಿನ್ನುತ್ತಿರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದರು.Sign in to your account
Username or Email Address


Password

 Remember Me


