ದಾವಣಗೆರೆ: ಯಾರೂ ತಮ್ಮ ಬೆಳೆಗಳನ್ನು ನಾಶ ಪಡಿಸಿಕೊಳ್ಳಬಾರದು. ಬೆಳೆ ನಾಶ ಪಡಿಸಿಕೊಂಡವರಿಗೆ ಯಾವುದೇ ಕಾರಣಕ್ಕೂ ಸರ್ಕಾರ ಪರಿಹಾರ ಕೊಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚಸಿದ್ದಾರೆ.ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇವಲ ಪ್ರಕೃತಿ ವಿಕೋಪಕ್ಕೆ ನಾಶವಾದರೆ ಮಾತ್ರ ಪರಿಹಾರ ನೀಡುತ್ತೇವೆ. ರೈತರು ಯಾವು ಬೆಳೆದ ಬೆಳೆಗಳನ್ನು ಅವರೇ ನಾಶ ಪಡಿಸಿಕೊಂಡರೆ ಪರಿಹಾರ ನೀಡುವುದಿಲ್ಲ. ಹೂವಿನ ಬೆಳೆ ನಷ್ಟವಾದರೆ ಅದಕ್ಕೆ ಪರಿಹಾರದ ನೀಡುವ ಕುರಿತು ಸಿಎಂ ಜೊತೆ ಚರ್ಚಿಸುತ್ತೇನೆ. ದಾವಣಗೆರೆಯಲ್ಲಿ 2.58 ಕೋಟಿ ರೂ.ಗಳಷ್ಟು ಬೆಳೆ ನಷ್ಟವಾಗಿದೆ ಎಂದು ವರದಿ ಬಂದಿದೆ. ಸಿಎಂ ಎಲ್ಲ ಜಿಲ್ಲೆಗಳಿಂದ ವರದಿ ತರಿಸಿಕೊಂಡಿದ್ದಾರೆ ಎಂದರು.ಹೂವು ಬೆಳೆದ ರೈತರು ಸಾಕಷ್ಟು ನಷ್ಟವನ್ನು ಅನುಭವಿಸಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕೃಷಿ ಚಟುವಟಿಕೆಗಳು ನಿಲ್ಲಬಾರದು. ಸರ್ಕಾರ ಕೂಡ ಎಲ್ಲ ಇಲಾಖೆಗೆ ನಿರ್ದೇಶನ ನೀಡಿದೆ. ನಾನೂ ಪ್ರತಿಯೊಂದು ಜಿಲ್ಲೆಗೂ ಹೋಗಿ ಪರಿಶೀಲನೆ ಮಾಡುತ್ತಿದ್ದೇನೆ. ಕೃಷಿ ಚಟುವಟಿಕೆಗಳಿಗೆ ಎಲ್ಲ ರೀತಿಯ ಬೆಂಬಲ ನೀಡುತ್ತೇವೆ. ದಾವಣಗೆರೆಯಲ್ಲಿ ಕೆಲ ಕಡೆ ಕಳಪೆ ಬೀಜಗಳನ್ನು ಮಾರಾಟ ಮಾಡುತ್ತಾರೆ ಎನ್ನುವುದು ತಿಳಿದು ಬಂದಿದೆ. ಕಳಪೆ ಬೀಜ ಮಾರಾಟ ಮಾಡುವವರು ಎಷ್ಟೇ ದೊಡ್ಡವರಾಗಿದ್ದರು ಅವರ ಮೇಲೆ ಕೇಸ್ ಮಾಡುತ್ತೇವೆ ಎಂದು ಭರವಸೆ ನೀಡಿದರು.ದಾವಣಗೆರೆಯಲ್ಲಿ ಮೂರು ಕೊರೊನಾ ಪ್ರಕರಣಗಳು ನೆಗೆಟಿವ್ ಬಂದಿವೆ. 28 ದಿನ ಪೂರೈಸಿದರೆ ಕ್ಲೀನ್ ಜೋನ್‍ಗೆ ಬರುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಮೈಮರೆಯಬಾರದು ಎಂದರು.Sign in to your account
Username or Email Address


Password

 Remember Me


