ರಾಮನಗರ: ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಮತ್ತು ರೇವತಿ ವಿವಾಹ ಕಲ್ಯಾಣೋತ್ಸವ ಅದ್ಧೂರಿ ಸೆಟ್‍ನಲ್ಲಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಎಚ್‍ಡಿ ಕುಮಾರಸ್ವಾಮಿ ಫಾರ್ಮ್ ಹೌಸ್‍ನಲ್ಲಿ ನಡೆದಿದೆ.ಮದುವೆಗಾಗಿ ಕೇತಗಾನಹಳ್ಳಿಯಲ್ಲಿನ ಕುಮಾರಸ್ವಾಮಿ ಫಾರ್ಮ್ ಹೌಸ್‍ನಲ್ಲಿ ಸಪ್ತಪದಿ ಕಲ್ಯಾಣ ಮಂಟಪವನ್ನು ನಿರ್ಮಿಸಲಾಗಿತ್ತು. ಬೆಳಗ್ಗೆ 9.30ರಿಂದ 10.20ರ ಶುಭಲಗ್ನದಲ್ಲಿ ವರ ನಿಖಿಲ್ ರೇವತಿಯ ಕೊರಳಿಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ನವ ದಂಪತಿಗೆ ಮದುವೆಯಲ್ಲಿ ಭಾಗಿಯಾಗಿದ್ದ ಗಣ್ಯರು, ಹಿತೈಷಿಗಳು ಧಾರೆ ಎರೆಯುವ ಮೂಲಕ ಆಶೀರ್ವಾದ ಮಾಡಿದ್ದಾರೆ.ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ದಂಪತಿ, ಎಚ್‍ಡಿ ಕುಮಾರಸ್ವಾಮಿ ದಂಪತಿ ಹಾಗೂ ಉದ್ಯಮಿ ಮಂಜುನಾಥ್ ದಂಪತಿ ಸಮ್ಮುಖದಲ್ಲಿ ನಿಖಿಲ್ ಮತ್ತು ರೇವತಿ ವಿವಾಹ ಕಾರ್ಯಕ್ರಮ ನೆರವೇರಿದೆ. ನಿಖಿಲ್ ಹಾಗೂ ರೇವತಿ ಮನೆಯವರು, ಆಪ್ತರಷ್ಟೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಕುಟುಂಬದವರು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.Karnataka: Nikhil Kumarswamy, son of former Karnataka CM HD Kumaraswamy, tied the knot with Revathi, the grand-niece of former Congress Minister for Housing M Krishnappa, today in Bengaluru. pic.twitter.com/HrLpGD5s9p— ANI (@ANI) April 17, 2020ಈ ಹಿಂದೆ ರಾಮನಗರದ ಜನಪದ ಲೋಕದ ಬಳಿ ವಿವಾಹ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಪರಿಣಾಮದಿಂದ ಬೆಂಗಳೂರಿನಲ್ಲಿ ಕುಮಾರಸ್ವಾಮಿ ನಿವಾಸಕ್ಕೆ ಶಿಫ್ಟ್ ಆಗಿತ್ತು. ಈಗ ಬೆಂಗಳೂರು ರೆಡ್ ಜೋನ್‍ನಲ್ಲಿದೆ. ಹೀಗಾಗಿ ಕುಮಾರಸ್ವಾಮಿ ಅವರು ಮತ್ತೆ ಗ್ರೀನ್ ಜೋನ್ ರಾಮನಗರಕ್ಕೆ ಮದುವೆ ಶಿಫ್ಟ್ ಮಾಡಿದ್ದರು.Sign in to your account
Username or Email Address


Password

 Remember Me


