ಧಾರವಾಡ: ಧಾರವಾಡ ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕಿ(ಹಿಂದಿನ ಸಿಂಡಿಕೇಟ್ ಬ್ಯಾಂಕ್)ನ ಎಲ್ಲ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್‍ನಲ್ಲಿಡಲಾಗಿದೆ.ಕೊರೊನಾ ಪಾಸಿಟಿವ್ ಬಂದಿರುವ ಧಾರವಾಡ ಜಿಲ್ಲೆಯ ರೋಗಿ ನಂ.194 ಮಾ.19ರಂದು ಪ್ರಯಾಣಿಸಿದ ಮುಂಬೈ- ಹುಬ್ಬಳ್ಳಿ ವಿಆರ್‍ಎಲ್ ಬಸ್ ಮೂಲಕವೇ ಧಾರವಾಡ ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕ್ (ಹಿಂದಿನ ಸಿಂಡಿಕೇಟ್ ಬ್ಯಾಂಕ್)ನ ಸಿಬ್ಬಂದಿಯೊಬ್ಬರ ಪುತ್ರನೂ ಆಗಮಿಸಿದ್ದರು. ಇವರು ರೋಗಿ ನಂ.194 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ಪರಿಗಣಿಸಿ ಸರ್ಕಾರಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ.ಅವರ ತಂದೆಯು ದ್ವಿತೀಯ ದರ್ಜೆಯ ಸಂಪರ್ಕ ಹೊಂದಿದ ವ್ಯಕ್ತಿಯಾಗಿರುವುದರಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಬ್ಯಾಂಕಿನ ಎಲ್ಲ ಸಿಬ್ಬಂದಿಯನ್ನು ಅವರ ಮನೆಗಳಲ್ಲಿ ಪ್ರತ್ಯೇಕವಾಗಿ ಇಡಲಾಗಿದೆ. ಬ್ಯಾಂಕನ್ನು ಸಂಪೂರ್ಣವಾಗಿ ಸ್ಯಾನಿಟೈಸೇಷನ್ ಮಾಡಲಾಗಿದೆ. ಸೋಮವಾರ ಏ.13 ಹಾಗೂ ಏ.15 ರಂದು ಬ್ಯಾಂಕಿನ ವಹಿವಾಟು ನಡೆದಿಲ್ಲ. ಸಂಪರ್ಕಿತ ವ್ಯಕ್ತಿಗಳ ಪ್ರಯೋಗಾಲಯ ವರದಿ ಬಂದ ಕೂಡಲೇ ಬ್ಯಾಂಕ್ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.Sign in to your account
Username or Email Address


Password

 Remember Me


