ಹುಬ್ಬಳ್ಳಿ: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ನಗರದ ಪ್ರಖ್ಯಾತ ಮೂರುಸಾವಿರ ಮಠದಿಂದ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಲಾಗಿದೆ.ಮೂರುಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಶ್ರೀಗಳು 10 ಲಕ್ಷ ರೂ. ಚೆಕ್ ಅನ್ನು ಸಚಿವ ಜಗದೀಶ್ ಶೆಟ್ಟರ್ ಅವರ ಮೂಲಕ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಬಿಜೆಪಿ ಮುಖಂಡ ಪ್ರದೀಪ್ ಶೆಟ್ಟರ್, ಶಂಕ್ರಣ್ಣ ಮುನವಳ್ಳಿ ಸೇರಿದಂತೆ ಮಠದ ಉನ್ನತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.ಇದಕ್ಕೂ ಮುನ್ನ ಸಿದ್ದಗಂಗಾ ಮಠ ಹಾಗೂ ಸಿದ್ದಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರೂ.ವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಲಾಗಿತ್ತು. ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಏಪ್ರಿಲ್ 4ರಂದು ಮಠದಿಂದ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯಿಂದ 25 ಲಕ್ಷ ರೂ. ಸೇರಿ ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದ್ದರು.ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ಮೈಸೂರಿನ ಶ್ರೀ ಸುತ್ತೂರು ಮಠವು ಏಪ್ರಿಲ್ 1ರಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿತ್ತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಇವತ್ತು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜೆಎಸ್‍ಎಸ್ ಮಹಾವಿದ್ಯಾಪೀಠ ಹಾಗೂ ಸಂಸ್ಥೆಯ ನೌಕರರಿಂದ 50 ಲಕ್ಷ ರೂ.ಗಳ ದೇಣಿಗೆಯನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸಚಿವರಿಗೆ ನೀಡಿದ್ದರು.Sign in to your account
Username or Email Address


Password

 Remember Me


