ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಇಬ್ಬರು ಎಸ್‍ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಇಲ್ಯಾಸ್,ಅಬ್ದುಲ್ ಬಷೀರ್ ಬಂಧಿತ ಆರೋಪಿಗಳು. ಮೈಕಾಲ್ತೊ ಬಿಸಯಾ ಎಂಬ ಫೇಸ್‍ಬುಕ್ ಪೇಜ್ ನಲ್ಲಿ ಕೊರೊನಾಕ್ಕಿಂತಲೂ ಭಯಾನಕ ಮೋದಿ, ಒಂದೇ ದಿನ ಎರಡು ಸಾವಿರ ಜನರನ್ನು ಬಲಿ ತೆಗೆದುಕೊಂಡ ಮೋದಿ ವೈರಸ್, ನಮ್ಮ ದೇಶದಲ್ಲಿ ಅತೀ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಜೀವಂತ ಕೊರೊನಾ ಎಂದು ಅಮಿತ್ ಶಾ ಫೋಟೋವನ್ನು ಎಡಿಟ್ ಮಾಡಲಾಗಿತ್ತು.ಅಮಿತ್ ಶಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ರೀತಿಯ ಫೋಟೋವನ್ನು ಪೇಜ್‍ನಲ್ಲಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಕಾರ್ಯಚರಣೆ ನಡೆಸಿದ ಮಂಗಳೂರು ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.Sign in to your account
Username or Email Address


Password

 Remember Me


