ಶಿವಮೊಗ್ಗ: ಕೊರೊನಾ ಮಹಾಮಾರಿ ಭೀತಿಯ ನಡುವೆಯೂ ಜೀವದ ಹಂಗು ತೊರೆದು ಅನೇಕ ಪೊಲೀಸರು ಮತ್ತು ಪೌರ ಕಾರ್ಮಿಕರು ಜನರ ಆರೋಗ್ಯದ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದಾರೆ. ಇದೀಗ ಅಂತಹವರಿಗೆ ಜಿಲ್ಲೆಯಲ್ಲಿ ಪಾದ ಪೂಜೆ ಸಲ್ಲಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.ಶಿವಮೊಗ್ಗದ ರಕ್ಷಣೆ ಹಾಗೂ ಸ್ವಚ್ಛತೆ ಕರ್ತವ್ಯದಲ್ಲಿ ನಿರತರಾಗಿರುವ ಪೊಲೀಸರು ಹಾಗೂ ಪೌರ ಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸಿ ಕೃತಜ್ಞತೆ ಸಲ್ಲಿಸಲಾಗಿದೆ. ನಗರದ ಕಡೇಕಲ್ ಬಳಿ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪೊಲೀಸರು ಹಾಗೂ ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ ಪಾದಪೂಜೆ ಮಾಡಿ, ಸನ್ಮಾನಿಸಿದರು.ಕೊರೋನಾ ಭೀತಿ ನಡುವೆಯೂ ಮನೆಯಲ್ಲಿರದೇ ಲಾಕ್‍ಡೌನ್‍ನಲ್ಲಿ ಪೊಲೀಸರು ಹಾಗೂ ಪೌರ ಕಾರ್ಮಿಕರು ಹಗಲು ರಾತ್ರಿ ಅವಿರತ ಶ್ರಮ ವಹಿಸುತ್ತಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇವರಿಬ್ಬರ ಸೇವೆ ಅನನ್ಯವಾದುದು ಎಂದು ಅವರ ಬಗ್ಗೆ ಮೆಚ್ಚುಗೆ ಮಾತನಾಡಿದರು. ಸಭೆಯಲ್ಲಿ ಮೋಹನ್ ರೆಡ್ಡಿ, ಶಿವಕುಮಾರ್, ಮಲ್ಲಿಕಾರ್ಜುನ್, ಮುಕುಂದ ರೆಡ್ಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.Sign in to your account
Username or Email Address


Password

 Remember Me


