ನವದೆಹಲಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆದೇಶಿಸಲಾದ ಲಾಕ್ ಡೌನ್ ಮಂಗಳವಾರ ಮುಗಿಯಲಿದ್ದು, ನಾಳೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 14ರಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಬರೆಯಲಾಗಿದೆ.https://twitter.com/PMOIndia/status/1249620775679610880ಒಟ್ಟಿನಲ್ಲಿ ಕೊರೊನಾ ವೈರಸ್ ಭೀತಿ ಬಳಿಕ ನಾಳೆಯ ಭಾಷಣ ಸೇರಿ ಮೂರನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ನಾಳೆಯೇ ಮತ್ತೊಮ್ಮೆ ದೇಶವ್ಯಾಪಿ ಲಾಕ್ ಡೌನ್ ಬಗ್ಗೆ ಘೋಷಣೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.ಈ ಹಿಂದೆ ಮಾರ್ಚ್ 19 ರಂದು ದೇಶವನ್ನು ಉದ್ದೇಶಿಸಿ ಮಾ.21 ರಂದು ಜನತಾ ಕರ್ಫ್ಯೂ ಮಾಡಬೇಕೆಂದು ಕೇಳಿಕೊಂಡಿದ್ದರು. ಇದಾದ ಬಳಿಕ ಮಾ.24 ರಂದು 21 ದಿನಗಳ ಲಾಕ್‍ಡೌನ್ ಘೋಷಣೆ ಮಾಡಿದ್ದರು.ಬಳಿಕ ಏ.5 ರಂದು ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ರಾತ್ರಿ 9 ಗಂಟೆಗೆ ವಿದ್ಯುತ್ ದೀಪ ಆಫ್ ಮಾಡಿ ದೀಪ/ ಕ್ಯಾಂಡಲ್ ಲೈಟ್/ ಮೊಬೈಲ್ ಟಾರ್ಚ್ ಬೆಳಗಿ ಎಂದು ಮನವಿ ಮಾಡಿದ್ದರು. ಇದಕ್ಕೂ ದೇಶದಲ್ಲಿ ಭಾರೀ ಬೆಂಬಲ ಸಿಕ್ಕಿತ್ತು.Sign in to your account
Username or Email Address


Password

 Remember Me


