ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿನ ಸಂಖ್ಯೆಯಂತೆಯೇ ಮಂಗನಕಾಯಿಲೆಯ ಅಟ್ಟಹಾಸ ಮುಂದುವರಿದಿದ್ದು, ಸಿದ್ದಾಪುರ ತಾಲೂಕಿನಲ್ಲಿ ಇಂದು ಕೂಡ 5 ಪ್ರಕರಣ ಕಾಣಿಸಿಕೊಳ್ಳುವುದರೊಂದಿಗೆ ಜನರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.ರವಿವಾರ ಒಂದೇ ದಿನ ಸಿದ್ದಾಪುರ ತಾಲೂಕು ವ್ಯಾಪ್ತಿಯಲ್ಲಿ 4 ಕೆ.ಎಫ್.ಡಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಇದು ಮುಂದುವರಿದು ಇಂದು ಕೂಡ ಒಂದೇ ದಿನ 5 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಕೋರ್ಲಕೈ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲೇ ಈ 5 ಪ್ರಕರಣಗಳು ಪತ್ತೆಯಾಗಿದ್ದು ಅಲ್ಲಿನ ಜನರು ಮತ್ತಷ್ಟು ಆತಂಕ ಪಡುವಂತೆ ಮಾಡಿದೆ.ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕು ವ್ಯಾಪ್ತಿಯಲ್ಲೇ 32 ಕೆ.ಎಫ್.ಡಿ ಪ್ರಕರಣಗಳು ದೃಢಪಟ್ಟಿವೆ. ಕೋರ್ಲಕೈ ಆರೋಗ್ಯ ಕೇಂದ್ರಕ್ಕೆ ಬೆಳಗಾವಿ ಜಂಟಿ ನಿರ್ದೇಶಕರು ಭೇಟಿ ನೀಡಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಸಂಜೆ ರಾಜ್ಯ ಆರೋಗ್ಯ ಮಹಾನಿರ್ದೇಶಕರ ಜೊತೆ ವಿಡಿಯೋ ಸಂವಾದ ನಡೆಯಲಿದ್ದು, ಮಂಗನಕಾಯಿಲೆಯ ಪರಿಸ್ಥಿತಿಗಳ ಬಗ್ಗೆ ಜಂಟಿ ನಿರ್ದೇಶಕರು ವರದಿ ಸಲ್ಲಿಸೋ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.Sign in to your account
Username or Email Address


Password

 Remember Me


