ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದ್ದರೂ ಸಹ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಂಗ್ರಹ ಮಾತ್ರ ಎಗ್ಗಿಲ್ಲದೆ ನಡೆದಿದೆ.ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಅಬಕಾರಿ ಪೊಲೀಸರು ಸಿಂಧನೂರಿನಲ್ಲಿ ಗಾಂಧಿನಗರದಲ್ಲಿ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಅಕ್ರಮ ಮದ್ಯ ಜಪ್ತಿ ಮಾಡಿದ್ದಾರೆ. ಜೊತೆಗೆ ರಂಗಾಪುರ ಕ್ಯಾಂಪ್ ನಿವಾಸಿ ತೇಜ ಎಂಬುವವನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಗಾಂಧಿನಗರದ ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಮದ್ಯ ಹಾಗೂ ಒಂದು ಕಾರನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿದ್ದಾರೆ. ದಾಳಿ ವೇಳೆ 96 ಲೀಟರ್ ಮದ್ಯ, 41 ಲೀಟರ್ ಬಿಯರ್ ದೊರೆತಿದೆ. ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆ ಮದ್ಯ ಮಾರಾಟ ಲಾಕ್‍ಡೌನ್ ಆಗಿದ್ದರೂ ಅಕ್ರಮಕ್ಕೆ ಮಾತ್ರ ಬ್ರೇಕ್ ಬೀಳುತ್ತಿಲ್ಲ. ಹೀಗಾಗಿ ಅಬಕಾರಿ ಪೊಲೀಸರು ನಿರಂತರವಾಗಿ ದಾಳಿ ನಡೆಸಿದ್ದಾರೆ.Sign in to your account
Username or Email Address


Password

 Remember Me


