ಹಾಸನ: ಮೊದಲೇ ಕೊರೊನಾ ವೈರಸ್ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ರೈತರೊಬ್ಬರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಮನೆ ಮತ್ತು ಸುಮಾರು 3.5 ಲಕ್ಷ ರೂ. ಬೆಲೆ ಬಾಳುವ 21 ಸಾವಿರ ಕೊಬ್ಬರಿ ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಭಸ್ಮವಾಗಿದೆ.ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮೆಳ್ಳಹಳ್ಳಿ ಗ್ರಾಮದ ರೈತ ರಮೇಶ್ ಅವರ ಮನೆಯಲ್ಲಿ ಇಂದು ಸಿಲಿಂಡರ್ ಸ್ಫೋಟವಾಗಿದೆ. ಪರಿಣಾಮ ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ 21 ಸಾವಿರ ಕೊಬ್ಬರಿ ಬೆಂಕಿಗಾಹುತಿಯಾಗಿದೆ. ಸಿಲಿಂಡರ್ ಸ್ಫೋಟದ ಬಗ್ಗೆ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಮೊದಲೇ ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತ ಇದೀಗ ಮನೆ ಮತ್ತು ದುಡಿಮೆಗೆ ಆಧಾರವಾಗಿದ್ದ ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ಕಳೆದುಕೊಂಡು ಕಂಗಾಲಾಗಿದ್ದಾರೆ. ಸರ್ಕಾರ ಆದಷ್ಟು ಬೇಗ ನೆರವಿಗೆ ಧಾವಿಸುವಂತೆ ಮನವಿ ಮಾಡಿದ್ದಾರೆ.Sign in to your account
Username or Email Address


Password

 Remember Me


