ಹುಬ್ಬಳ್ಳಿ: ಕೊರೊನಾ ವೈರಸ್ ಕರಿನೆರಳು ಪೊಲೀಸ್ ಇಲಾಖೆಯ ಮೇಲೆ ಬಿದ್ದಿದ್ದು, ಹುಬ್ಬಳ್ಳಿಯ ಐವರು ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.ನಗರದ ಕಮರಿಪೇಟೆ ಪೊಲೀಸ್ ಠಾಣೆಯ ಐವರು ಪೊಲೀಸರನ್ನು ಹೋಂ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಹುಬ್ಬಳ್ಳಿಯ ಮುಲ್ಲಾ ಓಣಿಯ ಸೋಂಕಿತನ ಜೊತೆ ಪ್ರಾಥಮಿಕ ಸಂರ್ಪಕ ಹೊಂದಿದ ಹಿನ್ನೆಲೆಯಲ್ಲಿ ಐದು ಜನ ಪೊಲೀಸ್ ಸಿಬ್ಬಂದಿ ಕೈಗೆ ಆರೋಗ್ಯ ಇಲಾಖೆ ಸೀಲ್ ಹಾಕಿದೆ. ಮನೆಯಲ್ಲಿ ಪ್ರತ್ಯೇಕವಾಗಿರುವಂತೆ ಸೂಚಿಸಿದೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳ ಮಾಹಿತಿ ಲಭ್ಯವಾಗಿದೆ.ಸದ್ಯ ಐವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದ್ದು, ಈ ಠಾಣೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ. ಮುಲ್ಲಾ ಓಣಿಯ ವ್ಯಕ್ತಿ ಸೋಂಕು ತಗುಲಿರೋದು ದೃಢವಾಗುತ್ತಿದ್ದಂತೆ ಹುಬ್ಬಳ್ಳಿ ಸಂಪೂರ್ಣ ಲಾಕ್‍ಡೌನ್ ಮಾಡಲಾಗಿದೆ. ಶುಕ್ರವಾರ ನಗರದಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದ ಜನಕ್ಕೆ ಪೊಲೀಸರು ಲಾಠಿ ರುಚಿ ತೋರಿಸಿದ್ದರು.Sign in to your account
Username or Email Address


Password

 Remember Me


