ಮೈಸೂರು: ವಿಶ್ವವಿಖ್ಯಾತ ದಸರಾ ಗಜಪಡೆಯ (Mysuru Dasara Elephants) ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿಗೆ ತತ್ತರಿಸಿದ ಕಂಜನ್ ಆನೆ ದಿಕ್ಕೇ ಕಾಣದಂತೆ ಅರಮನೆ ಆವರಣದಿಂದ ಹೊರ ಓಡಿದ್ದಾನೆ. ಘಟನೆ ಕುರಿತು ಪಬ್ಲಿಕ್‌ ಟಿವಿ ಜೊತೆಗೆ ಡಿಸಿಎಫ್‌ ಪ್ರಭುಗೌಡ (DCF Prabhugowda) ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ್ದಾರೆ.ಈ ಎರಡು ಆನೆಗಳು ಒಂದೇ ಶಿಬಿರದ ಆನೆಗಳು. ಅಲ್ಲೂ ಕೂಡ ಆಗಾಗ ಇವು ಜಗಳ ಆಡುತ್ತವೆ. ಅದೇ ಜಗಳ ಇಲ್ಲೂ ಮುಂದುವರಿದಿದೆ. ಊಟಕ್ಕೆ ಬಂದ ವೇಳೆ ಧನಂಜಯ, ಕಂಜನ್‌ ಮೇಲೆ ಗಲಾಟೆ ಶುರು ಮಾಡಿದ, ಆಗ ಕಂಜನ್ ಆನೆ ಮಾವುತ ಕೆಳಗೆ ಬಿದ್ದ. ನಂತರ ಧನಂಜಯ ಆನೆ ಆರ್ಭಟ ಹೆಚ್ಚಾಯ್ತು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ – ಹರಿದ್ವಾರದಲ್ಲಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗಧನಂಜಯ ಮತ್ತು ಕಂಜನ್ ದುಬಾರೆ ಶಿಬಿರದ ಆನೆಗಳು. ಆನೆಗಳ ನಡುವಿನ ಫೈಟ್ ಇದೇ ಮೊದಲಲ್ಲ, ಕೊನೆಯೂ ಅಲ್ಲ. ಈ ಎರಡು ಆನೆಗಳು ದುಬಾರೆ ಆನೆ ಶಿಬಿರದಲ್ಲೂ ಇದೇ ರೀತಿ ಪದೇ ಪದೇ ಜಗಳವಾಡುತ್ತವೆ. ಒಂದು ಬಾರಿ ಕಂಜನ್ ಆನೆ ಧನಂಜಯ ಆನೆ ಮೇಲೆ ಅಟ್ಯಾಕ್ ಮಾಡಿದರೆ ಮತ್ತೊಂದು ಬಾರಿ ಧನಂಜಯ, ಕಂಜನ್ ಮೇಲೆ ಅಟ್ಯಾಕ್ ಮಾಡ್ತಾನೆ. ಅಲ್ಲದೇ ಗಂಡಾನೆಗಳು ಆಗಾಗ್ಗೆ ಶೌರ್ಯ ಪ್ರದರ್ಶನ ಮಾಡೋದು, ತುಂಟಾಟ ಆಡೋದು ಕಾಮನ್‌, ಅವರಲ್ಲವನ್ನೂ ಕಂಟ್ರೋಲ್‌ ಮಾಡುವ ಸಾಮರ್ಥ್ಯ ನಮ್ಮ ಮಾವುರಿಗೆ ಇದೆ ಎಂದು ಹೇಳಿದ್ದಾರೆ.ನಿನ್ನೆ ಬ್ಯಾರಿಕೇಡ್‌ ಓಪನ್‌ ಇದ್ದ ಕಾರಣ ಕಂಜನ್‌ ಅದನ್ನ ತಳ್ಳಿಕೊಂಡು ಹೋಗಿದ್ದಾನೆ. ಹೊರಗೆ ಜನಸಮೂಹ ನೋಡಿದ ಕೂಡಲೇ ತಣ್ಣಗಾಗಿದ್ದಾನೆ. ಅಷ್ಟರಲ್ಲಿ ನಮ್ಮ ಮಾವುತರು ಕಂಟ್ರೋಲ್‌ ಮಾಡಿದ್ದಾರೆ. ಕಂಜನ್‌ ಆನೆ ಓಡುವ ಸ್ಪೀಡ್‌ಗೆ ಮಾವುತ ಜಿಗಿದೇ ಬಿಟ್ಟ. ಆದ್ರೆ ಧನಂಜಯ ಆನೆ ಮಾವುತನ ಧೈರ್ಯ ಮೆಚ್ಚಲೇಬೇಕು. ಆನೆ ಓಡಿದರೂ ಅದರ ಮೇಲೆ ಕುಳಿತು ಕಂಟ್ರೋಲ್‌ ಮಾಡುವ ಕೆಲಸ ಮಾಡಿಲ್ಲ. ದೇವರ ದಯೆಯಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಜನ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: Manipur | ಸಚಿವರ ಆಪ್ತ ಸಹಾಯಕನೇ ಕಿಡ್ನ್ಯಾಪ್‌ – ದುಷ್ಕರ್ಮಿಗಳ ಗುಂಪಿಗೆ ತೀವ್ರ ಶೋಧಏನಾಗಿತ್ತು? 
ವಿಶ್ವವಿಖ್ಯಾತ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿಗೆ ತತ್ತರಿಸಿದ ಕಂಜನ್ ಆನೆ ದಿಕ್ಕೆ ಕಾಣದಂತೆ ಅರಮನೆ ಆವರಣದಿಂದ ಹೊರ ಓಡಿದ್ದಾನೆ. ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿರುವ ಹಾಗೂ ಅವನನ್ನು ಹಿಡಿದು ತರಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಹರಸಾಹಸ ಪಡುತ್ತಿರುವ ದೃಶ್ಯಗಳೂ ಸೆರೆಯಾಗಿವೆ. ‘ಮಹೇಂದ್ರ’ ಆನೆಯು ಕಂಜನ್‌ನನ್ನು ನಿಯಂತ್ರಿಸಲು ಹಿಂದಿನಿಂದ ಓಡಿತು. ಜನರು ಆನೆ ಓಡಿಬರುವುದನ್ನು ನೋಡಿ ದಿಕ್ಕಾಪಾಲಾಗಿ ಓಡಿದರು.ದಸರಾದಲ್ಲಿ 18 ಆನೆಗಳು ಭಾಗಿ:
ಈ ಬಾರಿ ದಸರಾದಲ್ಲಿ 14 ಆನೆಗಳು ಸಕ್ರಿಯವಾಗಿ ಭಾಗಿಯಾಗುತ್ತಿವೆ. ಇನ್ನು ನಾಲ್ಕು ಆನೆಗಳನ್ನು ಮೀಸಲು ಆನೆಗಳನ್ನಾಗಿ ಆಯ್ಕೆ ಮಾಡಲಾಗಿದೆ. ಒಂದು ವೇಳೆ ಈ 14 ಆನೆಗಳ ಆರೋಗ್ಯದಲ್ಲಿ ಏನಾದರೂ ವ್ಯತ್ಯಯ, ವ್ಯತ್ಯಾಸಗಳಾದರೆ ಮೀಸಲು ಆನೆಗಳನ್ನು ಬಳಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ – ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌Sign in to your account
Username or Email Address


Password

 Remember Me


