ರಾಯಚೂರು: ಜಾನುವಾರುಗಳಿಗೆ ಕುಡಿಯಲು ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ನಡೆದಿದೆ.ನಾಗರಾಜ್ (10), ಕಾರ್ತಿಕ್ (8) ಹಾಗೂ ರವಿಕುಮಾರ್ (7) ಮೃತ ಬಾಲಕರು. ಮೃತ ಬಾಲಕರು ಒಂದೇ ಕುಟುಂಬದವರಾಗಿದ್ದು, ಇಂದು ಬೆಳಗ್ಗೆ ಸುಮಾರು 7 ಗಂಟೆಗೆ ಜಾನುವಾರಗಳಿಗಾಗಿ ನೀರು ತರಲು ಗ್ರಾಮದ ಹೊರವಲಯದಲ್ಲಿನ ಕೆರೆಯಲ್ಲಿ ಹೋಗಿದ್ದಾರೆ.ಈ ವೇಳೆ ಒಬ್ಬ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಇದನ್ನು ನೋಡಿದ ಮತ್ತೊಬ್ಬ ಬಾಲಕ ಆತನನ್ನು ಕಾಪಾಡಲು ಹೋಗಿ ಆತನೂ ಕೆರೆಯಲ್ಲಿ ಮುಳುಗಿದ್ದಾನೆ. ಈ ರೀತಿ ಮೂರು ಮಕ್ಕಳು ಒಬ್ಬರನ್ನ ಕಾಪಾಡಲು ಒಬ್ಬರು ಹೋಗಿ ಮೂವರು ನೀರುಪಾಲಾಗಿದ್ದಾರೆ. ಸ್ಥಳಿಯರು ಕೆರೆಯ ಬಳಿ ಹೋಗಿ ನೋಡಿದಾಗ ಬಾಲಕರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ತಕ್ಷಣ ಈ ಬಗ್ಗೆ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ.ಮಾಹಿತಿ ತಿಳಿದು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.Sign in to your account
Username or Email Address


Password

 Remember Me


