ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು (kaggalipura Police) ಶುಕ್ರವಾರ ಬಂಧಿಸಿದ್ದಾರೆ.ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದ್ದಾರೆ. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಇಂದು (ಶುಕ್ರವಾರ) ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ – ಹೆಚ್.ಡಿ ರೇವಣ್ಣ ಸವಾಲ್ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಬಿಗಿ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಿದೆ. 7 ಜೀಪುಗಳು, ಒಂದು ಮೀಸಲು ಪಡೆಯ ವಾಹನ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರದಲ್ಲಿ ಬಂಧಿಸಲಾಯಿತು. ಮಾರ್ಗಮಧ್ಯದಲ್ಲೇ ವೈದ್ಯಕೀಯ ತಪಾಸಣೆ ಮುಗಿದ ಬಳಿಕ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ. ವಿಚಾರಣೆ ನಂತರ ಸಂಜೆ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಒಂದು ಇಂದಿರಾ ಕ್ಯಾಂಟೀನ್ ಬಂದ್ – ಅಕ್ರಮ ಚಟುವಟಿಕೆಗಳ ತಾಣವಾದ ಕ್ಯಾಂಟೀನ್ಏನಿದು ಪ್ರಕರಣ?
ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್‌ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ (Private Resort) ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್‌ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್‌ ಕುಮಾರ್‌ (ಎ2), ಸುಧಾಕರ (ಎ3), ಕಿರಣ್‌ ಕುಮಾರ್‌ (ಎ4), ಲೋಹಿತ್‌ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ – 41 ದಿನಗಳ ಬಳಿಕ ವೈದ್ಯರ ಮುಷ್ಕರ ವಾಪಸ್Sign in to your account
Username or Email Address


Password

 Remember Me


