ಮಡಿಕೇರಿ: ಕೇರಳ ರಾಜ್ಯ ನೋಂದಣಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.ವಿರಾಜಪೇಟೆ ತಾಲೂಕಿನ ಮಾಪಿಳ್ಳೆತೋಡು ಎಂಬಲ್ಲಿ ಈ ಘಟನೆ ನಡೆದಿದೆ. ಇಂದು ಮುಂಜಾನೆ ಸುಮಾರು 4 ಗಂಟೆಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನೊಳಗಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಕಾರು ಗೋಣಿಕೊಪ್ಪಲು ಕಡೆಯಿಂದ ಕೇರಳಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕಾರು ಸೇತುವೆಯ ತಡೆಗೋಡೆಗೆ ಗುದ್ದಿ ಬಳಿಕ ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ. ಸಿನೀಮಿಯ ರೀತಿಯಲ್ಲಿ ಒಳಗಿದ್ದವರು ಪಾರಾಗಿದ್ದಾರೆ. ನದಿಯಲ್ಲಿ ನೀರಿಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


