ಮೈಸೂರು: ನಗರದಲ್ಲಿ ನಿರ್ಮಾಣವಾಗಿರುವ ಜಿಲ್ಲಾಸ್ಪತ್ರೆಯ ಹೊಸ ಕಟ್ಟಡವನ್ನು ಶೀಘ್ರವೇ ಲೋಕಾಪರ್ಣೆಗೊಳಿಸುವಂತೆ ಮಾಜಿ ಶಾಸಕ ವಾಸು ಅವರು ಜಿಲ್ಲಾ ಉಸ್ತುವಾರಿ ಮತ್ತು ವಸತಿ ಖಾತೆಯ ಸಚಿವ ವಿ. ಸೋಮಣ್ಣ ಅವರಲ್ಲಿ ಮನವಿ ಮಾಡಿದ್ದಾರೆ.ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಮೈಸೂರು, ಮಂಡ್ಯ, ಹಾಸನ, ಮಡಿಕೇರಿ, ಚಾಮರಾಜನಗರ ಜಿಲ್ಲೆಗಳಿಂದ ಬಡ ರೋಗಿಗಳು ಬರುತ್ತಾರೆ. ಇದರಿಂದ ಕೆ.ಆರ್ ಆಸ್ಪತ್ರೆ ಮೇಲೆ ಒತ್ತಡ ಹೆಚ್ಚಾಗಿದೆ. ಈ ಒತ್ತಡ ತಗ್ಗಿಸಲು ಹಿಂದಿನ ಸರ್ಕಾರ 64 ಕೋಟಿ ರೂ ವೆಚ್ಚದಲ್ಲಿ ಹೊಸ ಜಿಲ್ಲಾಸ್ಪತ್ರೆ ನಿರ್ಮಿಸಿದೆ. ಐದು ಅಂತಸ್ತಿನ ಕಟ್ಟಡ ನಿರ್ಮಾಣ ಪೂರ್ತಿಯಾಗಿದೆ. ಆದರೆ, ಅವಶ್ಯಕ ಯಂತ್ರೋಪಕರಣಗಳ ಅಳವಡಿಕೆ ಬಾಕಿ ಇದೆ.ಕೂಡಲೇ ಯಂತ್ರೋಪಕರಣಗಳ ಅಳವಡಿಸಿ, ವೈದ್ಯಕೀಯೇತರ ಸಿಬ್ಬಂದಿಗಳು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿ ನೇಮಕಾತಿ ಮಾಡಿ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಿ ಎಂದು ಶಾಸಕರು ಮನವಿ ಮಾಡಿದ್ದಾರೆ.Sign in to your account
Username or Email Address


Password

 Remember Me


