ಬೆಂಗಳೂರು: ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿರುವ ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ರಾಜ್ಯದ ಎಲ್ಲಾ ನಗರಗಳು, ಅದರಲ್ಲೂ ಬೆಂಗಳೂರಿನಲ್ಲಿ ಜನಜೀವನ ಎಂದಿನಂತೆ ಸಾಮಾನ್ಯವಾಗಿರುತ್ತದೆ ಮತ್ತು ಜನರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ತಡೆ ಇರುವುದಿಲ್ಲ. ಶಾಲಾ-ಕಾಲೇಜು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಮತ್ತು ಸಾರಿಗೆ ಕೂಡ ಸಾಮಾನ್ಯವಾಗಿರುತ್ತದೆ.ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಅಂತಹವರ ವಿರುದ್ಧ ಪೊಲೀಸ್ ವ್ಯವಸ್ಥೆ ಕಠಿಣ ಕ್ರಮ ಕೈಗೊಳ್ಳುತ್ತದೆ. ಬಂದ್‍ಗಳು ಜನವಿರೋಧಿ ಎಂದು ಹಿಂದೆ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಈ ವಿಷಯ ಬಂದ್‍ಗೆ ಕರೆ ಕೊಟ್ಟವರ ಗಮನದಲ್ಲಿ ಇರಬೇಕು.ಜನರು ಯಾವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವುದು ನನ್ನ ಕಳಕಳಿಯ ಮನವಿ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Sign in to your account
Username or Email Address


Password

 Remember Me


