ಮಂಗಳೂರು: ಕಾಲೇಜ್ ವಿದ್ಯಾರ್ಥಿನಿಯರನ್ನು ಚುಡಾಯಿಸಿ, ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ವ್ಯಕ್ತಿಯನ್ನು ಹಿಡಿದು ವಿದ್ಯಾರ್ಥಿನಿಯರೇ ಸಖತ್ ಕ್ಲಾಸ್ ತೆಗೆದುಕೊಂಡು ಗ್ರಹಚಾರ ಬಿಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಕಾಮುಕ ರೋಹಿತ್‍ಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಾಲೇಜಿನಲ್ಲಿ ಕಾಂಟ್ರಾಕ್ಟ್ ಕೆಲಸ ಮಾಡುತ್ತಿದ್ದ ಆರೋಪಿ ರೋಹಿತ್ ಮ್ಯಾನೇಜ್ಮೆಂಟ್ ಕಡೆಯವನು ಎಂದು ಬೇಕಾಬಿಟ್ಟಿ ವರ್ತಿಸುತ್ತಿದ್ದನು. ಕ್ಲಾಸ್‍ಗೆ ಬಂದು ವಿದ್ಯಾರ್ಥಿನಿಯರ ಕೈ ಹಿಡಿದು ಎಳೆಯುತ್ತಿದ್ದನು. ರೋಹಿತ್‍ನ ಈ ಕಿರುಕುಳದ ಬಗ್ಗೆ ಪ್ರಾಂಶುಪಾಲರಿಗೆ ಈ ಹಿಂದೆಯೇ ಕಂಪ್ಲೆಂಟ್ ಮಾಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.ಇತ್ತ ರೋಹಿತ್ ಕಾಟಕ್ಕೆ ಬೇಸತ್ತ ವಿದ್ಯಾರ್ಥಿನಿಯರು ಆತನನ್ನ ಹಿಡಿದು ಪ್ರಾಂಶುಪಾಲರ ಮುಂದೆಯೇ ಗ್ರಹಚಾರ ಬಿಡಿಸಿದ್ದಾರೆ. ವಿದ್ಯಾರ್ಥಿನಿಯರು ಕಾಮುಕನನ್ನು ತರಾಟೆಗೆ ತೆಗೆದುಕೊಂಡ ದೃಶ್ಯವನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.ತರಾಟೆಗೆ ತೆಗೆದುಕೊಂಡ ಬಳಿಕ ಆರೋಪಿ ವಿರುದ್ಧ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿಯರು ದೂರು ಕೂಡಾ ನೀಡಿದ್ದಾರೆ. ಸದ್ಯ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಲೈಂಗಿಕ ದೌರ್ಜನ್ಯ ಆರೋಪದಡಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.Sign in to your account
Username or Email Address


Password

 Remember Me


